ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊಸ ಹೆಜ್ಜೆ
Minister Lakshmi Hebbalkar takes new step towards economic empowerment of rural women
ಬೆಳಗಾವಿ 09: ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ತಿಕ ಸಬಲೀಕರಣದಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎನ್ನುವ ಚಿಂತನೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು, ಎಂಬಿಕೆ ಮತ್ತು ಎಲ್ಸಿಆರಿ್ಪ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ, ಕೃಷಿ ಸಖಿ ಮತ್ತು ಪಶು ಸಖಿಯರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದು ಸಚಿವರ ಉದ್ದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು.ಪ್ರತಿ ಕುಟುಂಬಕ್ಕೂ ಸರ್ಕಾರದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳುವುದು, ಪ್ರಗತಿಯ ಪರೀಶೀಲನೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದು, ತನ್ಮೂಲಕ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಾಗುವಂತೆ ನೋಡಿಕೊಳ್ಳುವುದು ಈ ಕ್ರಮದ ಉದ್ದೇಶ.ಕಾಂಗ್ರೆಸ್ ಸರಕಾರ ಹಿಂದಿನಿಂದಲೂ ಗ್ರಾಮೀಣಾಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡು ಬಂದಿದೆ. ಗ್ರಾಮ ಪಂಚಾಯಿತಿಗಳನ್ನು ಜಾರಿಗೊಳಿಸಿದ್ದು, ಬಲಗೊಳಿಸಿದ್ದು, ಕೃಷಿ ಸಹಾಯಕಿಯರು, ಪಶು ಸಹಾಯಕಿಯರನ್ನು ನೇಮಕ ಮಾಡಿದ್ದು, ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದ್ದು, ಈಗ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು ಎಲ್ಲ ಕೂಡ ಕಾಂಗ್ರೆಸ್ ಸರಕಾರ. ಇವೆಲ್ಲದರ ಮೂಲ ಉದ್ದೇಶವೇ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ. ಈಗ ಈ ದಿಸೆಯಲ್ಲಿ ಇನ್ನೊಂದು ಹೆಜ್ಜೆ ಮುಂದಡಬೇಕಿದೆ. ಇದರಲ್ಲಿ ನೀವೆಲ್ಲ ಸಕ್ರೀಯವಾಗಿ ತೊಡಗಿಕೊಳ್ಳಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಸಖಿಯರಿಗೆ ಕರೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತ್, ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಗ್ರಾಮೀಣ ಮುಖಂಡರಾದ ಮನೋಹರ್ ಬಾಂಡಗಿ, ಬಾಳು ದೇಸೂರಕರ್, ಸಿ.ಸಿ.ಪಾಟೀಲ, ಪಶು ಹಾಗೂ ಕೃಷಿ ಸಖಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 