ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ
Minister M. B. Patil inaugurated various development works
ವಿಜಯಪುರ 24: ಶಾಲೆಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸುವದರ ಮೂಲಕ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಚಲ ಸಂಕಲ್ಪ ಹೊಂದಿರುವುದಾಗಿ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲಾ ್ಲಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮೋಹಿತೆ ವಸ್ತಿ ಮತ್ತು ಅರಕೇರಿ ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೋಹಿತೆ ವಸ್ತಿಯಲ್ಲಿ ಕೆ.ಎಸ್.ಐ.ಐ.ಡಿ.ಸಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿ.ಎಸ್.ಆರ್ ಅನುದಾನದಲ್ಲಿ ಸರಕಾರಿ ಶಾಲೆಗಳಲ್ಲಿ ನೂತನ ಕೊಠಡಿಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಮಹಾನಗರಗಳ ಕಾನ್ವೆಂಟ್ ಶಾಲೆಗಳಲ್ಲಿರುವ ಮಾದರಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು. ಅರಕೇರಿಯಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಟಿ.ಎಸ್.ಇಯೋಜನೆ ಯಡಿ ನಿರ್ಮಿಸಿರುವ ನೂತನ ಸಮುದಾಯ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯ ಭವನಗಳು ಗ್ರಾಮದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುತ್ತವೆ. ಅಲ್ಲದೇ, ಸಮುದಾಯದ ಏಕತೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಸಿದ್ದಣ್ಣ ಸಕ್ರಿ, ಅರ್ಜುನ ರಾಠೋಡ, ಚನ್ನಪ್ಪ ದಳವಾಯಿ, ಪೀರಪಟೇಲ ಪಾಟೀಲ, ಡಿ.ಎಲ್.ಚವ್ಹಾಣ, ಅಶೋಕ ದಳವಾಯಿ, ಎಸ್.ಎಚ್.ನಾಡಗೌಡ, ಸುನಂದಾ ಬರಕಡೆ, ನಿಂಗು ಬೆಳ್ಳುಬ್ಬಿ, ಶಿವಾನಂದ ಇಂಚಗೇರಿ, ಸುರೇಶ ಬಂಡಾರಿ, ತುಕಾರಾಮ ರಾಠೋಡ, ಹುಸೇನ ಮನಗೂಳಿ, ಸಿದ್ದಣ್ಣ ಶಿರಾಳಶೆಟ್ಟಿ, ತುಕಾರಾಮ ಮೋಹಿತೆ,ತಹಶೀಲ್ದಾರ ಸುರೇಶಚಾವಲರ, ತಾ.ಪಂ ಆಡಳಿತಾಧಿಕಾರಿ ಬಸವಂತರಾಯ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 