ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ. ಬಿ. ಪಾಟೀಲ ಧನ ಸಹಾಯ
Minister M. B. Patil provides financial assistance to poor talented students
ವಿಜಯಪುರ 02: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಸಂಕಷ್ಟದಲ್ಲಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹಣಕಾಸು ನೆರವು ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.ಇಂದು ಶನಿವಾರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಆಲಮೇಲದ ವಿದ್ಯಾರ್ಥಿ ಆಲಮೇಲದ ಉದಯಕುಮಾರ ನಾರಾಯಣಕರ ಮತ್ತು ರತ್ನಾಪುರದ ಮನೋಹರ ಹರಗೆ ಅವರ ಎಂ.ಬಿ.ಬಿ.ಎಸ್ ಕೋರ್ಸಿನ ಬೋಧನಾ ಶುಲ್ಕ, ಊಟ ಮತ್ತು ವಸತಿ(ಹಾಸ್ಟೇಲ್ ಮತ್ತು ಮೆಸ್)ಕ್ಕೆ ಅಗತ್ಯವಾಗಿರುವ ಹಣದ ಚೆಕ್ ನ್ನು ಸಚಿವರು ವಿತರಿಸಿದರು. ಬಳಿಕ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶ್ರಮವಹಿಸಿ, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣಕ್ಕೆ ಅಗತ್ಯವಾಗಿರುವ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು ಮತ್ತು ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟಾರ್ ಡಾ. ಆರ್. ವಿ. ಕುಲಕರ್ಣಿ ಮತ್ತು ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.*ಸಚಿವರಿಂದ ಆರ್ಥಿಕ ನೆರವು ಪಡೆದ ವಿದ್ಯಾರ್ಥಿಗಳ ಹಿನ್ನೆಲೆ*ಆಲಮೇಲದ ವಿದ್ಯಾರ್ಥಿ ಉದಯಕುಮಾರ ನಾರಾಯಣಕರಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂ.ಬಿ.ಬಿ.ಎಸ್ ಸೀಟು ಪಡೆದಿದ್ದಾರೆ. ಇವರ ತಂದೆ ಸಂಜೀವಕುಮಾರ ನಾರಾಯಣಕರ ಮತ್ತು ತಾಯಿ ಮಹಾದೇವಿ ನಾರಾಯಾಕರ ಇಬ್ಬರೂ ಕೃಷಿ ಕಾರ್ಮಿಕರಾಗಿದ್ದಾರೆ. ಈ ವಿದ್ಯಾರ್ಥಿಗೆ ಇಬ್ಬರು ಸಹೋದರಿಯರಿದ್ದಾರೆ. ಈ ವಿದ್ಯಾರ್ಥಿಗೆ ಎಂ.ಬಿ.ಬಿ.ಎಸ್ ಕೋರ್ಸಿಗೆ ಅಗತ್ಯವಾಗಿರುವ ರೂ.1 ಲಕ್ಷ 88, ಸಾವಿರಷ 850 ಮೊತ್ತದ ಚೆಕ್ ನ್ನು ಸಚಿವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಉದಯಕುಮಾರ ನಾರಾಯಣಕರ, ತಾನು ಮುಂದೆ ಚಿಕ್ಕಮಕ್ಕಳ ತಜ್ಞನಾಗುವ ಗುರಿ ಹೊಂದಿದ್ದು, ಸಚಿವ ಸಹಾಯ ತನ್ನ ಕನಸು ನಮಸಾಗಲು ಸಹಾಯವಾಗಿದೆ. ಸಚಿವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ಎರಡನೇ ವಿದ್ಯಾರ್ಥಿ ತಿಕೋಟಾ ತಾಲೂಕಿನ ರತ್ನಾಪುರದ ಮನೋಹರ ಹರಗೆ ಬೆಂಗಳೂರಿನಲ್ಲಿರುವ ಬಿ.ಎಂ.ಅರಿ್ಸ.ಐ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಸೀಟು ಪಡೆದಿದ್ದಾನೆ.
ಈ ವಿದ್ಯಾರ್ಥಿಗೆ ಬೇಕಾದ ರೂ. 1 ಲಕ್ಷ 28 ಸಾವಿರದ 400 ಮೊತ್ತದ ಚೆಕ್ ನ್ನು ಸಚಿವರು ವಿತರಿಸಿದರು. ವಿದ್ಯಾರ್ಥಿಯ ತಂದೆ ಬಸಪ್ಪ ಹರಗೆ ಮತ್ತು ತಾಯಿ ಯಮನವ್ವ ಹರಗೆ ರೈತರಾಗಿದ್ದು, ಎರಡು ಎಕರೆ ಹೊಲ ಹೊಂದಿದ್ದಾರೆ. ಈತನ ಅಣ್ಣ ಬಿ.ಎ ಓದುತ್ತಿದ್ದು, ಈತನ ತಂಗಿ ಪ್ರಥಮ ಪಿಯುಸಿ ಓದುತ್ತಿದ್ದಾರೆ. ಆರ್ಥಿಕ ನೆರವಿನ ಚೆಕ್ ಪಡೆದ ವಿದ್ಯಾರ್ಥಿ ಸಚಿವರ ಸಹಾಯಕ್ಕೆ ಸಂತಸ ವ್ಯಕ್ತಪಡಿಸಿದ್ದು, ಕೃತಜ್ಞತೆ ಸಲ್ಲಿಸಿದ್ದಾನೆ. ಮುಂದೆ ಹೃದ್ರೋಗ ತಜ್ಞನಾಗುವ ಗುರಿ ಹೊಂದಿದ್ದು, ಸಚಿವರ ಸಹಾಯದಿಂದ ವೈದ್ಯನಾಗುವ ನನ್ನ ಕನಸು ನನಸಾಗುತ್ತಿದೆ. ಯಾವಾಗಲೂ ಋಣಿಯಾಗಿರುವೆ. ವೈದ್ಯನಾದ ಬಳಿಕ ಬಡವರ ಸೇವೆ ಮಾಡುವುದಾಗಿ ತಿಳಿಸಿದ್ದಾನೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 