ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ ಪಾಟೀಲ, ಶಾಸಕ ಮನಗೂಳಿ ಭೇಟಿ
Minister M.B. Patil, MLA Managooli visit flood-affected areas
ಲೋಕದರ್ಶನ ವರದಿ
ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ ಪಾಟೀಲ, ಶಾಸಕ ಮನಗೂಳಿ ಭೇಟಿ
ಸಿಂದಗಿ 10: ಇತ್ತೀಚೆಗೆ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹಾಗೂ ಸಿಂದಗಿ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿದ್ದರು.
ದೇವಣಗಾಂವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಸಂಪರ್ಕ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸೇತುವೆ ಸಬಲೀಕರಣಕ್ಕೆ ಸಕರಾರ ಅನುದಾನ ಬಿಡುಗಡೆ ಮಾಡಲು ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲೇ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿಯವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಪಾರ ಪ್ರಮಾಣದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಿಂದಗಿ ಮತಕ್ಷೇತ್ರದ ಓರಾದ ಸದಾಶಿವಗಡ್ ರಾಜ್ಯ ಹೆದ್ದಾರಿ 34ರಲ್ಲಿ ಬರುವ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದು, ಇದರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ರೂ.3 ಕೋಟಿ ಅನುದಾನ ಬಿಡುಗಡೆಗೊಳಿಸಲು ಮುಂದಾಗಿದೆ. ಸೇತುವೆ ದುರಸ್ತಿ ಬಗ್ಗೆ ಸಚಿವರ ಗಮನಕ್ಕೂ ಶಾಸಕರು ತೆಗೆದುಕೊಂಡು ಬಂದಿದ್ದರು. ಅದರಂತೆ ಇದೀಗ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 