ಲೋಕದರ್ಶನ ವರದಿ
ಹಾಸ್ಟೇಲ್ ನಿರ್ಮಾಣಕ್ಕೆ ರೂ. 50ಲಕ್ಷ ವಿಶೇಷ ಅನುದಾನ ನೀಡಿದ ಸಚಿವ ಎಂ.ಬಿ ಪಾಟೀಲ
ವಿಜಯಪುರ, 22: ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ವಿದ್ಯಾರ್ಥಿನಿಯರ ಹಾಸ್ಟೇಲ್ ನಿರ್ಮಾಣಕ್ಕೆ ರೂ. 50 ಲಕ್ಷ ವಿಶೇಷ ಅನುದಾನ ನೀಡಿದ್ದಾರೆ.
ಇಂದು ಮಂಗಳವಾರ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ಶಾಂತಾದೇವಿ ಟಿ. ಅವರಿಗೆ ಸಚಿವರು ವಿಶೇಷ ಅನುದಾನದ ಚೆಕ್ ನ್ನು ವಿತರಿಸಿದರು.
ಇತ್ತೀಚೆಗೆ ಮಹಿಳಾ ವಿವಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರಿಗೆ ಕುಲಪತಿಗಳು ವಿದ್ಯಾರ್ಥಿನಿಯರಿಗೆ ಮೂಲಸೌಕರ್ಯ ಒದಗಿಸಲು ಅನುದಾನದ ಕೊರತೆ ಇದೆ ಎಂದು ಗಮನ ಸೆಳೆದಿದ್ದರು. ಅಂದು ನೀಡಿದ ಭರವಸೆಯಂತೆ ಸಚಿವರು ಇಂದು ಅನುದಾನದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೇ, ಮುಂಬರುವ ದಿನಗಳಲ್ಲಿ ಸರಕಾರದಿಂದ ಮಹಿಳಾ ವಿವಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಮಹಿಳಾ ವಿವಿ ಕುಲಪತಿ ಡಾ. ಶಾಂತಾದೇವಿ ಟಿ. ಮಾತನಾಡಿ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ಮತ್ತು ಸಚಿವ ಎಂ.ಬಿ.ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್.ಎಸ್. ಮುಧೋಳ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಾಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಮಹಿಳಾ ವಿವಿ ಮೌಲ್ಯಮಾಪನ ಕುಲಸಚಿವ ಪ್ರೋ. ಎಚ್.ಎಂ. ಚಂದ್ರಶೇಖರ, ವಿದ್ಯಾರ್ಥಿಗಳ ಕಲ್ಯಾಣಾಧಿಕಾರಿ ಪ್ರೊ. ಲಕ್ಷ್ಮಿದೇವಿ ವೈ, ಸಹರಜಿಸ್ಟ್ರಾರ್ ಡಾ. ನಟರಾಜ ಎ. ದುರಗಣ್ಣನವರ ಉಪಸ್ಥಿತರಿದ್ದರು.