ದಿ.18ರಂದು ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

ದಿ.18ರಂದು ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ  Minister M.B. Patil to visit the district on the 18th

ವಿಜಯಪುರ 16:  ಸಚಿವ ಎಂ.ಬಿ.ಪಾಟೀಲರು ದಿ.18ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.  

ಅಂದು ಬೆ. 9ಗಂ. ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್‌ ಟೈಮ್ಸ್‌ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ. ಮ.12ಗಂ. ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ಮ.1ಗಂ. ಬಿ.ಎಲ್‌.ಡಿ.ಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.  

ನಂತರ ಮ.3ಗಂ. ತಿಕೋಟಾ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.2ಕಿ.ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ. ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ. ಸಂ.4.30ಗಂ. ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.