ನವದೆಹಲಿ, ಜೂನ್ 12,ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶುಭಾಶಯ ಕೋರಿದ್ದಾರೆ. “ಬಿಜೆಪಿಯ ಕಠಿಣ ಪರಿಶ್ರಮಿ ನಾಯಕರು ಮತ್ತು ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗೆ ಜನ್ಮದಿನದ ಶುಭಾಶಯಗಳು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. “ನರೇಂದ್ರ ಸಿಂಗ್ ತೋಮರ್ ಸಂಪೂರ್ಣ ಸಮರ್ಪಣೆಯೊಂದಿಗೆ ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ಕೆಲಸದಲ್ಲಿ ನಿರತರಾಗಿದ್ದಾರೆ. ದೇವರು ಅವರಿಗೆ ಉತ್ತಮ ಆರೋಗ್ಯ ಕೊಟ್ಟು ಕಾಪಾಡಲಿ ಮತ್ತು ದೀರ್ಘಾಯುಷ್ಯವನ್ನು ನೀಡಲಿ, '' ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.