ಹೃದಯ ಶಸ್ತ್ರಚಿಕಿತ್ಸೆ ನಡೆಸಿದ ತಂಡಕ್ಕೆ ಸಚಿವ ಪಾಟೀಲ ಅಭಿನಂದನೆ ವರ್ಷದೊಳಗಾಗಿ 543ಕ್ಕೂ ಅಧಿಕ ಹೃದಯ ಕಾಯಿಲೆ ಪ್ರಕರಣಗಳಿಗೆ ಶಸ್ತ್ರಚಿಕಿತ್ಸೆ
Minister Patil congratulates the team that performed the heart surgery. More than 543 heart disease
ಗದಗ 26: ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಕಳೆದ ಹಲವು ವರ್ಷಗಳಿಂದ ತನ್ನ ವಿಶೇಷತೆಗಳಿಂದ ತನ್ನ ಹಿರಿಮೆ ಹೆಚ್ಚಿಸುತ್ತ ಮಾದರಿಯಾಗುವಲ್ಲಿ ಕೆಲಸ ಮಾಡುತ್ತಿರುವ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಇದೀಗ ಖಿಂಗಿಋ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗದಗಿನ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕ್ಯಾಥ್ ಲ್ಯಾಬ್ನಲ್ಲಿ ಮೊಟ್ಟ ಮೊದಲ ಬಾರಿಗೆ ಖಿಂಗಿಋ (ಟ್ರಾನ್ಸ್ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ಇಂಪ್ಲಾಂಟೇಶನ) ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗಿದೆ. ಈ ಮೂಲಕ ಜಯದೇವ ಆಸ್ಪತ್ರೆ ಹೊರತುಪಡಿಸಿ ಖಿಂಗಿಋ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಗದಗ ಪಾತ್ರವಾಗಿದೆ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ 22-25 ಲಕ್ಷ ರೂ. ವೆಚ್ಚ ತಗುಲಬಹುದಾದ ಖಿಂಗಿಋ ಹೃದಯ ಶಸ್ತ್ರಚಿಕಿತ್ಸೆಯನ್ನು ಜಿಲ್ಲೆಯ ನರಗುಂದ ತಾಲೂಕಿನ 68 ವರ್ಷದ ರಮೇಶ ಮುರಡಿ ಅವರು ಎಸ್ಸಿಪಿ-ಟಿಎಸ್ಪಿ ಅನುದಾನದಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಕೆಎಚ್ಪಿಐಎಂಎಸ್ ನಿರ್ದೇಶಕ ಡಾಽ ಬಸವರಾಜ ಬೊಮ್ಮನಹಳ್ಳಿ ಮಾರ್ಗದರ್ಶನದಡಿ ಹೃದ್ರೋಗ ತಜ್ಞರಾದ ಡಾಽ ಸಂಜೀವ್ ಚಿಂತಾಮನಿ ಸಹಕಾರದಲ್ಲಿ ಬೆಂಗಳೂರಿನ ಖಿಂಗಿಋ ತಜ್ಞ ವೈದ್ಯ ಡಾಽ ವಿಕ್ರಮ ಪಾಟೀಲ ನೇತೃತ್ವದ ವೈದ್ಯಕೀಯ ತಂಡ 68 ವರ್ಷದ ವ್ಯಕ್ತಿಗೆ ಸಂಕೀರ್ಣವಾದ ‘ಹೈಬ್ರಿಡ್ ಖಿಂಗಿಋ ವಿಧಾನದ ಮೂಲಕ ಯಶಸ್ವಿ ಹೃದಯ ಮಹಾಪಧಮನಿಯ ಕವಾಟ ಬದಲಾವಣೆ ಮಾಡಲಾಗಿದೆ. ಜಯದೇವ ಆಸ್ಪತ್ರೆ ಹೊರತುಪಡಿಸಿ ಇದು ರಾಜ್ಯದಲ್ಲೇ ಸರಕಾರಿ ಆಸ್ಪತ್ರೆ ಹಾಗೂ ಇತರೆ ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕ್ಯಾಥ್ ಲ್ಯಾಬ್ವೊಂದರಲ್ಲಿ ನಡೆಸಿದ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 