ಸಚಿವ ಸಂತೋಷ್ ಲಾಡ್ ಆಗಸ್ಟ್ 5ರಿಂದ ಧಾರವಾಡ ಜಿಲ್ಲಾ ಪ್ರವಾಸ
Minister Santosh Lad to tour Dharwad district from August 5
ಲೋಕದರ್ಶನ ವರದಿ
ಧಾರವಾಡ 4: ಸಂಪುಟ ದರ್ಜೆ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಆಗಸ್ಟ್ 5ರಿಂದ 7ರವರೆಗೆ ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 5 (ಬುಧವಾರ): ಬೆಳಿಗ್ಗೆ 10.15ಕ್ಕೆ ಕಲಘಟಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಕಲಘಟಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಕುರಿತು ಸಭೆ ನಡೆಸಲಿದ್ದಾರೆ.
ಆಗಸ್ಟ್ 6 (ಗುರುವಾರ): ಬೆಳಿಗ್ಗೆ 11 ಗಂಟೆಗೆ ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಕುರಿತು ಸಭೆ ನಡೆಸಲಿದ್ದಾರೆ. ಬಳಿಕ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಸ್ಥಿತಿ ಪರೀಶೀಲಿಸಿದ ನಂತರ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 7 (ಶುಕ್ರವಾರ): ಬೆಳಿಗ್ಗೆ 11.30ಕ್ಕೆ ಅಳ್ನಾವರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಪರೀಶೀಲಿಸಲಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 