ಉಪನಿರ್ದೇ ಶಕರ ಕಚೇರಿಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ
ಲೋಕದರ್ಶನ ವರದಿ
ಬೆಳಗಾವಿ, 18: ಡಿಸೆಂಬರ್ 18 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇ ಶಕರ ಕಛೇರಿಗೆ ಭೇಟಿ ನೀಡಿ ಪುರುಷರ ಅನುಪಾಲನಾ ಗೃಹ, ಬಾಲಕರ ಬಾಲಮಂದಿರ ಮತ್ತು ವೀಕ್ಷಣಾಲಯಗಳನ್ನು
ಪರಿಶೀಲಿಸಿದರು.
ನಂತರ ಉಪನಿದರ್ೇಶಕರ ಕಛೇರಿಯ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ ಇಲಾಖೆಯ ಸಮಸ್ಯೆಗಳ ಬಗ್ಗೆ ಮತ್ತು ಪ್ರಗತಿಯ ಬಗ್ಗೆ ಚಚರ್ಿಸಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಮತ್ತು ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಪೋಸ್ಟರ ಮತ್ತು ಕರ ಪತ್ರಗಳನ್ನು ಬಿಡುಗಡೆ ಮಾಡಿದರು.
ಸದರಿ ಯೋಜನೆಗಳ ಸೌಲಭ್ಯ ವನ್ನು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಇನ್ನೂ ಹೆಚ್ಚು ಶ್ರಮಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪನಿದರ್ೇಶಕರಾದ ಬಿ.ವಿ ವರವಟ್ಟೆ ಹಾಗೂ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.