ಮುಗಳಿಹಾಳ ಸಮೀಪ ಘಟಪ್ರಭಾ ಬಲದಂಡೆ ಕಾಲುವೆ ಪರೀಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
Minister Satish Jarkiholi inspected the Ghataprabha Right Bank Canal near Mugalihal.
ಲೋಕದರ್ಶನ ವರದಿ
ಯರಗಟ್ಟಿ 03: ತಾಲೂಕಿನ ಮುಗಳಿಹಾಳ ಗ್ರಾಮದ ಸಮೀಪ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ನಂತರ ಮಾತನಾಡಿ, "ಕಾಲುವೆಯ ಅಂಚಿನ ಗ್ರಾಮಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಆದ್ದರಿಂದ ಕಾಲುವೆ ಪರೀಶೀಲನೆಗೆ ಬಂದಿದ್ದೇನೆ. ನೀರಿನ ಹರಿವಿಗೆ ಉಂಟಾಗಿರುವ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ.
ಕಾಲುವೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಕೈಗೊಂಡು ನೀರಿನ ಹರಿವು ಸುಗಮವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ನೀರಾವರಿ ವ್ಯವಸ್ಥೆ ಸುಧಾರಿಸಿ ಗ್ರಾಮೀಣ ಜನರಿಗೆ ಸಮರ್ಕ ನೀರು ಒದಗಿಸುವುದು ಸರಕಾರದ ಆದ್ಯತೆಯಾಗಿದೆ ಎಂದರು. ಈ ವೇಳೆ ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಬಂಗಾರ್ಪ ಹರಳಿ, ಬಸವರಾಜ ಸತ್ತೂರಿ, ಮಲಿಕಸಾಬ್ ಬಾಗವಾನ, ಗೋಪಾಲ ದಳವಾಯಿ, ಹನುಮಂತ ಪೂಜೇರಿ, ವಿಠ್ಠಲ ಶಿಂತ್ರಿ, ರಾಕೇಶ ದಳವಾಯಿ ಹಾಗೂ ನೀರಾವರಿ ಅಧಿಕಾರಿಗಳು ಸೇರಿದಂತೆ ಮುಂತಾದವರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 