ಎಲ್ಆರ್ಐ ಯಾತ್ರೆ ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ
Minister Satish Jarkiholi launches LRI Yatra Khet Bachao campaign
ಗೋಕಾಕ 24 : ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ನಗರದ ಹಿಲ್ ಗಾರ್ಡನ್ ನಲ್ಲಿ ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ರಿವಾರ್ಡ್ ಮತ್ತು ಆತ್ಮ ಯೋಜನೆಗಳ ಅಡಿಯಲ್ಲಿ ಹಮ್ಮಿಕೊಳ್ಳಲಾದ ಎಲ್ಆರ್ಐ ಯಾತ್ರೆ ಹಾಗೂ “ಖೇತ್ ಬಚಾವೋ” ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಆರ್ಐ ಯಾತ್ರೆ ಹಾಗೂ ಖೇತ್ ಬಚಾವೋ ಅಭಿಯಾನದ ಮೂಲಕ ರೈತರಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಮಳೆನೀರಿನ ಸಂರಕ್ಷಣೆ, ಭೂ ಕುಸಿತ ತಡೆ, ಜಲಾನಯನ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮಗಳು ರೈತರ ಆದಾಯ ಹೆಚ್ಚಳಕ್ಕೆ ಹಾಗೂ ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಸಹಕಾರಿಯಾಗಲಿವೆ ಎಂದು ತಿಳಿಸಿದರು. ರಿವಾರ್ಡ್ ಮತ್ತು ಆತ್ಮ ಯೋಜನೆಗಳಡಿ ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ತರಬೇತಿ ಶಿಬಿರಗಳು ಹಾಗೂ ಕ್ಷೇತ್ರ ಪ್ರದರ್ಶನಗಳನ್ನು ಆಯೋಜಿಸಿ ರೈತರಿಗೆ ಅಗತ್ಯ ಮಾಹಿತಿ ಮತ್ತು ತಾಂತ್ರಿಕ ಮಾರ್ಗದರ್ಶನ ಒದಗಿಸಲಾಗುವುದು ಎಂದು ಇದೇ ವೇಳೆ ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಎಲ್ಆರ್ಐ ಯಾತ್ರೆ ಹಾಗೂ “ಖೇತ್ ಬಚಾವೋ” ಅಭಿಯಾನದ ಅಂಗವಾಗಿ ಜಾಗೃತಿ ವಾಹನಕ್ಕೆ ಸಚಿವರು ಹಸಿರು ನಿಶಾನೆ ತೋರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಖ್ಯಾತ ವೈದ್ಯ ಡಾ. ಗೀರೀಶ್ ಸೋನವಾಲಕರ್, ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ. ಕೊಳೇಕರ್, ಬೆಳಗಾವಿ ಉಪ ಕೃಷಿ ನಿರ್ದೇಶಕ ಎನ್.ಎ.ಸಲೀಂ, ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಗೋಕಾಕ ಸಹಾಯಕ ಕೇಷಿ ನಿರ್ದೇಶಕ ಎಮೆನ್. ನದಾಫ್, ಬೆಳಗಾವಿ ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಅಂಗಡಿ, ಸೇರಿದಂತೆ ಕೃಷಿ ಮತ್ತು ಜಲಾನಯನ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು ಭಾಗವಹಿಸಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 