ವಿಜಯನಗರ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶಗಳ ಪರೀಶೀಲನೆ ನಡೆಸಿದ ಸಚಿವ ಜಮೀರ್ ಅಹ್ಮದ್ ಖಾನ್
Minister Zameer Ahmed Khan inspected drought-affected areas in Vijayanagara district
ವಿಜಯನಗರ (ಹೊಸಪೇಟೆ), ಆ.8: ವಿಜಯನಗರ ಜಿಲ್ಲೆಯಲ್ಲಿ ಮುಂಗಾರು ಮಳೆಯು ಶೇ.60ರಷ್ಟು ಕೊರತೆಯಾಗಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳನ್ನು ವಸತಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಶುಕ್ರವಾರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರೀಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ಶೀಘ್ರದಲ್ಲೇ ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಗುವುದು ಎಂದರು. ಬೆಳೆ ವಿಮೆ ಮಾಡಿರುವ ಹಾಗೂ ವಿಮೆ ಮಾಡದ ರೈತರ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಳೆದ ವರ್ಷದ ಬೆಳೆ ವಿಮೆ ಪರಿಹಾರವಾಗಿ ?109.54 ಕೋಟಿ ಮಂಜೂರಾಗಿದ್ದು, ಇದುವರೆಗೆ ?66.39 ಕೋಟಿ ಬಿಡುಗಡೆ ಮಾಡಲಾಗಿದೆ. ಉಳಿದ ?42.13 ಕೋಟಿಯನ್ನೂ ಶೀಘ್ರ ಬಿಡುಗಡೆ ಮಾಡುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ತುಂಗಭದ್ರ ಜಲಾಶಯದಲ್ಲಿ ಪ್ರಸ್ತುತ 69 ಟಿಎಂಸಿ ನೀರಿನ ಸಂಗ್ರಹವಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆಗಸ್ಟ್ 15ರೊಳಗೆ ಬರ ಪರಿಸ್ಥಿತಿಯ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಸಾಮಾನ್ಯವಾಗಿ 188.7 ಮಿ.ಮೀ. ಮಳೆಯಾಗಬೇಕಿದ್ದರೆ ಕೇವಲ 76 ಮಿ.ಮೀ. ಮಳೆಯಾಗಿದ್ದು, ಶೇ.60ರಷ್ಟು ಮಳೆ ಕೊರತೆಯಾಗಿದೆ. 1.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಮಳೆ ಕೊರತೆಯಿಂದ ಸುಮಾರು 1.25 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹೊಸಪೇಟೆ ತಾಲ್ಲೂಕಿನಲ್ಲಿ ಶೇ.77 ಹಾಗೂ ಕೊಟ್ಟೂರಿನಲ್ಲಿ ಶೇ.44ರಷ್ಟು ಮಳೆ ಕೊರತೆಯಾಗಿದೆ. ಹಲವು ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು ಬೆಳೆ ಹಾನಿಯನ್ನು ಪರೀಶೀಲಿಸಿ, ಸೂಕ್ತ ಪರಿಹಾರ ಹಾಗೂ ವಿಮೆ ಸೌಲಭ್ಯ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಶಾಸಕ ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 