ಜೂ. 14 ರಿಂದ 16 ರವರೆಗೆ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಧಾರವಾಡ ಜಿಲ್ಲಾ ಪ್ರವಾಸ
Minister in-charge Santosh Lad's Dharwad district tour from June 14 to 16
ಧಾರವಾಡ 14: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜೂನ್ 14 ರಿಂದ 16 ರವರೆಗೆ ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಅವರು ನಾಳೆ (ಜೂ. 15) ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬುದ್ದ ಬಸವ ಮತ್ತು ಅಂಬೇಡ್ಕರ್ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜೂನ್ 16 ರಂದು ಬೆಳಿಗ್ಗೆ 10.30 ಗಂಟೆಗೆ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸಲಿದ್ದಾರೆ. ನಂತರ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳ ಸಭೆ ಜರುಗಿಸುವರು.
ನಂತರ ಮಧ್ಯಾನ 3 ಗಂಟೆಗೆ ಧಾರವಾಡ ಕೆ.ಸಿ.ಡಿ ಕಾಲೇಜಿನ ಸೃಜನ ರಂಗಮಂದಿರದಲ್ಲಿ ಹುಬ್ಬಳ್ಳಿ-ಧಾರವಾಡ ಕಾರಿಡಾರ್‌ನಲ್ಲಿ ಇ.ಆರ್.ಟಿ (ಎಲೆಕ್ಟ್ರಿಕ್ ರಾ್ಯಪಿಡ್ ಟ್ರಾನ್ಸಿಟ್) ವ್ಯವಸ್ಥೆಯ ಕುರಿತು ಸಾರ್ವಜನಿಕರು ಮತ್ತು ಬಾಗೀದಾರರೊಡನೆ ಸಮಾಲೋಚನೆ ನಡೆಸುವರು.
ನಂತರ ಅವರು ರಾತ್ರಿ 8:15 ಗಂಟೆಗೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 