ಸರ್ಕಾರದ ಯೋಜನೆಗಳು ರೈತರಿಗೆ ತಲುಪುವಂತಾಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister launches 9th round of vaccination campaign against foot-and-mouth disease in cattle
ಲೋಕದರ್ಶನ ವರದಿ
ಪಶುಗಳ ಕಾಲು ಬಾಯಿ ರೋಗದ 9ನೇ ಸುತ್ತಿನ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು
ಬೆಳಗಾವಿ: ಸರ್ಕಾರದ ಯೋಜನೆಗಳು ಕೇವಲ ಪುಸ್ತಕಕ್ಕೆ ಸೀಮಿತವಾಗದೇ ರೈತರ ಮನೆ ಬಾಗಿಲಿಗೆ ಮುಟ್ಟಬೇಕು. ರೈತ ಸಂತೋಷವಾಗಿದ್ದರೆ, ಇಡೀ ದೇಶವೇ ಸಮೃದ್ಧಿಯಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ವಿಶ್ವ ಪಶುವೈದ್ಯಕೀಯ ದಿನಾಚರಣೆ ಹಾಗೂ ಪಶುಗಳ ಕಾಲು ಬಾಯಿ ರೋಗದ 9ನೇ ಸುತ್ತಿನ ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತ ಬೆಳೆದರೆ ಗ್ರಾಮ ಬೆಳೆದಂತೆ, ಗ್ರಾಮ ಬೆಳೆದರೆ ಜಿಲ್ಲೆ ಬೆಳೆದಂತೆ, ಜಿಲ್ಲೆ ಬೆಳೆದರೆ ರಾಜ್ಯ, ದೇಶ ಬೆಳೆದಂತೆ ಎಂದರು. ತಾನು ಸಾಕಿದ ಪಶುಗಳು ಆರೋಗ್ಯವಾಗಿದ್ದರೆ, ರೈತ ಸಂತೋಷವಾಗಿರುತ್ತಾನೆ. ರೈತ ಯಾವಾಗಲೂ ಸಂತೋಷವಾಗಿದ್ದರಷ್ಟೇ ದೇಶ ಸಮೃದ್ಧಿಯಾಗಿರುತ್ತದೆ. ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ಮುಟ್ಟಿಸುವ ಸಲುವಾಗಿಯೇ ಪಶು ಸಖಿಯರನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು. ಪಶುಸಂಗೋಪನಾ ಇಲಾಖೆ ಹಾಗೂ ಹೈನುಗಾರಿಕೆ ಜೊತೆ ಮಹಿಳೆಯರಿಗೆ ಹತ್ತಿರದ ಸಂಬಂಧವಿದೆ. ಹೈನುಗಾರಿಕೆಯಿಂದ ಅದೆಷ್ಟೋ ಮಹಿಳೆಯರು ಹಾಲು ಉತ್ಪಾದನೆ ಮಾಡುವ ಮೂಲಕ ಜೀವನ ಕಂಡುಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ರೈತರಿಗೆ ಆಶ್ರಯದಾತ ಆಗಿರುವುದೇ ಮೇಕೆ, ಕುರಿ, ಹಸು, ಧನ, ಕರುಗಳು. ಇವುಗಳಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಸಚಿವರು ಹಾರೈಸಿದರು.
ಕ್ರಿಯಾಶೀಲ ಸಚಿವ ಕೆ.ವೆಂಕಟೇಶ್ ಹಿರಿಯರಾದ ಸಚಿವ ಸಂಪುಟ ಸಹದ್ಯೋಗಿ ಕೆ.ವೆಂಕಟೇಶ್ ಅವರು ಈ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ತುಂಬಾ ಕಾಳಜಿಯಿಂದ ಕೆಲಸ ಮಾಡುತ್ತಿದ್ದಾರೆ. ರೈತರ, ಪಶುಗಳ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿರುವ ಅವರು, ಸಚಿವ ಸಂಪುಟ ಸಭೆಯಲ್ಲಿ ಯಾವಾಗಲೂ ಇದರ ಬಗ್ಗೆ ಮಾತನಾಡುತ್ತಿದ್ದಾರೆ. ಅವರೊಬ್ಬ ಕ್ರಿಯಾಶೀಲ ಸಚಿವ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಆಸೀಫ್ ಸೇಠ್, ಗಣೇಶ್ ಹುಕ್ಕೇರಿ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಆಯುಕ್ತರಾದ ಶಿಲ್ಪಾ ನಾಗ್, ನಗರ ಪೋಲೀಸ್ ಆಯುಕ್ತರಾದ ಬೋರಸೆ ಭೂಷಣ್ ಗುಲಾಬರಾವ್, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಡಾ.ಪಿ.ಶ್ರೀನಿವಾಸ್, ಡಾ.ಯಲಗೌಡ, ಡಾ.ನಾಗರಾಜ, ಡಾ.ರವಿ ಸಾಲಿಗೌಡರ್, ಡಾ.ಕೂಡಗಿ, ಡಾ.ಗುರವ್ ಮುಂತಾದವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 