ರೂ. 1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವರಿಂದ ಚಾಲನೆ
Minister launches road development work worth Rs. 1 crore
ಗದಗ, ಮೇ 26: ನಗರದ ಕಳಸಾಪುರ ರಸ್ತೆ ಇಂಡಿಯನ್ ಬ್ಯಾಂಕ್ ಹತ್ತಿರದ ವಾರ್ಡ್ ಸಂಖ್ಯೆ 34 ಮತ್ತು 35ರಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಸಿ.ಸಿ ರಸ್ತೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳ ಸಚಿವ ಎಚ್ ಕೆ ಪಾಟೀಲರು ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಗರದ ಅಭಿವೃದ್ಧಿಗೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಅಗತ್ಯವಾಗಿದ್ದು, ಕಾಮಗಾರಿ ಯಾವುದೇ ಕಾರಣಕ್ಕೂ ಕಳಪೆಯಾಗಬಾರದು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರು ವರ್ಷಗಳ ಕಾಲ ಸುಗಮವಾಗಿ ಸಂಚಾರ ಮಾಡಲು ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ನಡೆಯಬೇಕು ಎಂದು ಹೇಳಿದರು. ಕಾಮಗಾರಿಯನ್ನು ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ ಸಚಿವರು, ಇಂದಿನಿಂದಲೇ ರಸ್ತೆ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದ್ದು, ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು. ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಹಂತದಲ್ಲಿ ಇನ್ನೊಂದು ರೂ. 1 ಕೋಟಿ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಥಳೀಯ ಜನರ ಬೇಡಿಕೆಗಳಿಗೆ ಸ್ಪಂದಿಸಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಎಚ್ ಕೆ ಪಾಟೀಲರು ತಿಳಿಸಿದರು.ಇದೇ ವೇಳೆ ಸಾರ್ವಜನಿಕ ಉದ್ಯಾನವನದ ಅಭಿವೃದ್ಧಿಗೂ ವಿಶೇಷ ಒತ್ತು ನೀಡಿದ ಸಚಿವರು, ಉದ್ಯಾನವನದಲ್ಲಿ ಜಿಮ್ ಸಾಮಗ್ರಿಗಳನ್ನು ಖರೀದಿಸಲು ರೂ. 5 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು. ಉದ್ಯಾನವನವನ್ನು ಸುಂದರ ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಪ್ರಮುಖರಾದ ಉಷಾ ದಾಸರ, ಅನೀಲ ಗರಗ, ದುರಗೇಶ್ ವಿಭೂತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ಹಲವು ಗಣ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 