ಬೆಂಗಳೂರು, ಎ 9,ಕರು, ಸಚಿವರು, ಎಂಎಲ್ ಸಿ ಗಳ ಶೇ.30ರಷ್ಟು ವೇತನವನ್ನು ಕಡಿತ ಮಾಡಲು ರಾಜ್ಯ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ. ಸಿ ಮಾದುಸ್ವಾಮಿ ಈ ವಿಷಯ ವಿಷಯ ಪ್ರಕಟಿ ಇದರಿಂದ 15 ಕೋಟಿ ರೂಪಾಯಿ ಸರ್ಕಾರದ ಬೊಕ್ಕಸಕ್ಕೆ ಬರಲಿದೆ ಎಂದು ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಇನ್ನು ರಾಜ್ಯದಲ್ಲಿ ಎರಡು ತಿಂಗಳಿಗೆ ಆಗುವಷ್ಟು ಪಡಿತರ ಸಂಗ್ರಹವಿದೆ. ರೇಷನ್ ಕಾರ್ಡ್ ಗೆ ಅರ್ಜಿ ಹಾಕುವವರಿಗೂ ರೇಷನ್ ಕೊಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 49 ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದು, ಪ್ರತಿ ತಾಲೂಕಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಗ್ರಾಮೀಣ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವರ್ಷದವರೆಗೆ ಶಾಸಕರು, ಸಚಿವರ ಸಂಬಳ ಶೇ.30ರಷ್ಟು ಕಡಿತ ಮಾಡುವುದರಿಂದ 15 ಕೋಟಿ ಹಣ ಬರಲಿದೆ ಎಂದು ಸಚಿವರು ವಿವರಿಸಿದರು.