ಪುಟ್ಟರಂಗಶೆಟ್ಟಿಗೆ ಎರಡನೇ ಬಾರಿ ಸಚಿವ ಸ್ಥಾನ: ವೆಂಕಟೇಶ್ ಹರ್ಷ
Ministerial post for Puttaranga Shetty for the second time: Venkatesh expresses happiness
ಕಂಪ್ಲಿ, ಆ.12: ಭಗೀರಥ ಉಪ್ಪಾರ ಸಮಾಜದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಸತತ ನಾಲ್ಕು ಬಾರಿ ಶಾಸಕರಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಎರಡನೇ ಬಾರಿ ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ ಎಂದು ಕಂಪ್ಲಿ ತಾಲ್ಲೂಕು ಶ್ರೀ ಭಗೀರಥ ಉಪ್ಪಾರ ಸಮಾಜದ ಉಪಾಧ್ಯಕ್ಷ ಯು. ವೆಂಕಟೇಶ್ ಹೇಳಿದರು.
ಪಟ್ಟಣದ ಐತಿಹಾಸಿಕ ಸೋಮಪ್ಪ ಕೆರೆ ಬಳಿಯ ದೇವಸ್ಥಾನಕ್ಕೆ ತೆರಳುವ ಮುಖ್ಯರಸ್ತೆಯ ಸಮೀಪದಲ್ಲಿರುವ ಕಂಪ್ಲಿ ತಾಲ್ಲೂಕು ಶ್ರೀ ಭಗೀರಥ ಉಪ್ಪಾರ ವೃತ್ತದಲ್ಲಿ ಬುಧವಾರ ಸಿಹಿ ಹಂಚಿ ಸಂಭ್ರಮಿಸಿದ ಬಳಿಕ ಅವರು ಮಾತನಾಡಿದರು.
ಉಪ್ಪಾರ ಸಮಾಜವು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಸಮುದಾಯದ ಅಭಿವೃದ್ಧಿಗೆ ಸರ್ಕಾರದ ಸೌಲಭ್ಯಗಳು ಅಗತ್ಯವಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಿರುವುದು ಸಮಾಜಕ್ಕೆ ಹರ್ಷ ತಂದಿದೆ. ಇದರಿಂದ ಸಮಾಜ ಇನ್ನಷ್ಟು ಅಭಿವೃದ್ಧಿ ಹೊಂದಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ಭಗೀರಥ ಉಪ್ಪಾರ ಸಮಾಜದ ಸಭೆ, ಸಮಾರಂಭಗಳಿಗಾಗಿ ಸರ್ಕಾರದ ನಿವೇಶನದೊಂದಿಗೆ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಯು. ನಾಗರಾಜ್, ಪ್ರಧಾನ ಕಾರ್ಯದರ್ಶಿ ಕೆ. ಗೋವಿಂದಪ್ಪ, ಯು. ಕುಬೇರ್, ಯು. ವೆಂಕಟಪತಿ, ಯು. ರಾಮದಾಸ್, ಕೋಟೆ ಗೋಪಾಲ್, ಎಸ್. ವೆಂಕಟೇಶ್, ಯು. ಬಸವರಾಜ್ ಸೇರಿದಂತೆ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 