ರುದ್ರ್ಪ ಲಮಾಣಿಗೆ ಸಚಿವ ಸ್ಥಾನ: ಕುಮಾರ ರಾಠೋಡ ಹರ್ಷ
Ministerial post for Rudra Lamani: Kumara Rathod expresses happiness
ದೇವರಹಿಪ್ಪರಗಿ 04: ಶಾಸಕ ರುದ್ರ್ಪ ಲಮಾಣಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿ ಬಂಜಾರರ ಅಸ್ಮಿತೆ ಮತ್ತು ಭಾವನೆಗೆ ಸರ್ಕಾರ ಬೆಲೆ ನೀಡಿದೆ ಎಂದು ಬಂಜಾರ ಸಮಾಜದ ಯುವ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸದಸ್ಯರಾದ ಕುಮಾರ ರಾಠೋಡ ಹರ್ಷ ವ್ಯಕ್ತಪಡಿಸಿದ್ದಾರೆ.ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರುದ್ರ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವಕ್ಕೆ ಧನ್ಯವಾದ ಅರ್ಿಸಿದರು.
ಬಂಜಾರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದಂತಾಗಿದ್ದು, ಸಮುದಾಯದ ಹಿರಿಯ ನಾಯಕ ಹಾಗೂ ಹಾವೇರಿ ಶಾಸಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿರುವುದು ಸಮುದಾಯದ ಅಭಿವೃದ್ಧಿಗೆ ಹೊಸ ಬಲ ತಂದಿದೆ ಹಾಗೂ ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕಿದೆ,ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳು ತಿಳಿಸಿದರು.ಇದೇ ಸಂದರ್ಭದಲ್ಲಿ ಪರಸು ಚವ್ಹಾಣ ಸಾತಿಹಾಳ ಗ್ರಾ.ಪಂ ನಿಕಟ ಪೂರ್ವ ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 