ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ: ಅರ್ಜಿ ಅವಧಿ ವಿಸ್ತರಣೆ

Minority Residential Schools 6th Class Admission: Application Deadline Extended

ಡಾ. ಬಾಬು ಜಗಜೀವನರಾಮ್ ಜಯಂತಿ: ಪೂರ್ವಸಿದ್ಧತಾ ಸಭೆ 


ಬೆಳಗಾವಿ 17: ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಜನ್ಮ ದಿನಾಚರಣೆಯನ್ನು ಪ್ರತಿ ವರ್ಷದಂತೆ ಏಪ್ರಿಲ್ 5 ರಂದು ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನರಾಮ್ ಉದ್ಯಾನವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.  

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.17) ನಡೆದ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಡಾ. ಬಾಬು ಜಗಜೀವನರಾಮ್ ಪುತ್ಥಳಿಗೆ ಸುಣ್ಣ-ಬಣ್ಣ, ಆಸನ, ಕುಡಿಯುವ ನೀರು, ಮೈಕ್, ಪೆಂಡಾಲ್ ಬ್ಯಾನರ್ ಅಳವಡಿಕೆ, ವೇದಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಹಾನಗರ ಪಾಲಿಕೆಯಿಂದ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.  

ಮೆರವಣಿಗೆ ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಪ್ರಾರಂಭಿಸಿ ರಾಣಿ ಚನ್ನಮ್ಮ ವೃತ್ತ, ಬಿಮ್ಸ್‌ ಕಾಲೇಜು, ಸದಾಶಿವ ಮಾರ್ಗವಾಗಿ ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನರಾಮ್ ಉದ್ಯಾನವನದವರೆಗೆ ತಲುಪಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  

ಸಮಾಜದ ಮುಖಂಡರಾದ ಬಾಬು ಪೂಜೇರಿ ಮಾತನಾಡಿ ಬಾಬು ಜಗಜೀವನರಾಮ್ ಜಯಂತಿ ಆಚರಣೆಗೆ ಉದ್ಯಾನವನದಲ್ಲಿ, ರಸ್ತೆಯ ಬದಿಯಲ್ಲಿ, ನಗರದ ಪ್ರಮುಖ ವೃತ್ತಗಳಲ್ಲಿ ಜಗಜೀವನರಾಮ್ ಜಯಂತಿ ಆಚರಣೆ ಕುರಿತು ಬ್ಯಾನರ್ ಗಳನ್ನು ಅಳವಡಿಸಬೇಕು ಎಂದು ವಿನಂತಿಸಿದರು.  

ಜಗಜೀವನರಾಮ್ ಉದ್ಯಾನವನದಲ್ಲಿ ಮಳೆಗಾಲದ ಸಂದರ್ಭದಲ್ಲಿ ಹೆಚ್ಚುವರಿ ಗಿಡಮರಗಳ ಸರಿಯಾಗಿ ಕಟಾವು ಮಾಡಿ ಉದ್ಯಾನವನದ ಗಿಡಮರಗಳ ನಿರ್ವಹಣೆ ಆಗಬೇಕಿದೆ ಎಂದರು.  

ಎಲ್ಲ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಣೆಗೆ ಆದೇಶ ಹೊರಡಿಸಬೇಕು. ವಿವಿಧ ಕಲಾ ತಂಡಗಳನ್ನು ಆಹ್ವಾನಿಸಬೇಕು. ಎಲ್ಲ ಅಧಿಕಾರಿಗಳು ಕಡಾಯವಾಗಿ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಾಬು ಪೂಜೇರಿ ಮನವಿ ಮಾಡಿಕೊಂಡರು.  

ಸಮಾಜದ ಮುಖಂಡ ಮಲ್ಲೇಶ ಚೌಗಲಾ ಮಾತನಾಡಿ  ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನರಾಮ್ ಪುತ್ಥಳಿ ನವೀಕರಣ ಹಾಗು ಸುತ್ತಮುತ್ತ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮಹಾನಗರ ಪಾಲಿಕೆಯಿಂದ ಬಾಬು ಜಗಜೀವನ್ ರಾಮ್ ಉದ್ಯಾನವನ ಸ್ವಚ್ಚತೆ ಕಾರ್ಯ ಕೈಗೊಳ್ಳುತ್ತಿಲ್ಲ. ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದಲ್ಲಿ ಮಾತ್ರ ಅಂತಹ ಸಂದರ್ಭದಲ್ಲಿ ಸ್ವಚ್ಛಗೊಳಿಸಲಾಗುತ್ತಿದೆ. ನಿರಂತರ ಸ್ವಚ್ಚತೆ ಕುರಿತು ಪಾಲಿಕೆ ಕ್ರಮ ವಹಿಸಬೇಕು ಹೇಳಿದರು.  

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಗರದ ಯಾವುದೇ ಪ್ರತಿಮೆಗಳಾಗಲಿ ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತರಾದ ಶುಭ. ಬಿ, ಎಸಿಪಿ ಸದಾಶಿವ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ್ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ  ಮುಖಂಡರಾದ ಭಾವಕಣ್ಣ ಭಂಗ್ಯಾಗೋಳ (ನಾಯಕ) ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.  

*** 

ಅಗ್ನಿಪಥ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ 


ಬೆಳಗಾವಿ,ಮಾ.17(ಕರ್ನಾಟಕ ವಾರ್ತೆ): ಅಗ್ನಿಪಥ ಯೋಜನೆಯಡಿಯಲ್ಲಿ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಗ್ನಿವೀರ ಜನರಲ್ ಡ್ಯೂಟಿ, ಅಗ್ನಿವೀರ ಟೆಕ್ನಿಕಲ್, ಅಗ್ನಿವೀರ ಟ್ರೇಡ್ಸ್‌ಮ್ಯಾನ್, ಹಾಗೂ 8ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಗ್ನಿವೀರ ಟ್ರೇಡ್ಸ್‌ಮ್ಯಾನ್, ಅಗ್ನಿವೀರ ಕ್ಲರ್ಕ್‌/ ಸ್ಟೋರ್ ಕಿಪ್ಪರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅಭ್ಯರ್ಥಿಗಳು ಆನ್‌ಲೈನ್ ವೆಬಸೈಟ್‌: ತಿತಿತಿ.ರಿಠಟಿಟಿಜಚಿಟಿಚಿಡಿಟಥಿ.ಟಿಛಿ.ಟಿ ಮೂಲಕ ಎಪ್ರಿಲ್ 04, 2025 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

**** 


ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ: ಅರ್ಜಿ ಅವಧಿ ವಿಸ್ತರಣೆ 

ಬೆಳಗಾವಿ 17: 2025-26 ನೇ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಳಗಾವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗಳಿಗೆ ಪ್ರವೇಶ ನೀಡಲು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 


ಆನಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್‌ 25, 2025 ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟ್‌ಲ್ ಲಿಂಕ್ ಣಣಠಿ:/ಜತಛಿಟಿಜಜಡಿತಛಿ.ಞಚಿಡಿಟಿಚಿಣಚಿಞಚಿ.ರಠ.ಟಿ/ ಮುಖಾಂತರ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಮತ್ತು ಇತರೇ ವಿವರಗಳನ್ನು ಣಣಠಿ://ಜಠ.ಞಚಿಡಿಟಿಚಿಣಚಿಞಚಿ.ರಠ.ಟಿ ಲಿಂಕ್‌ನಲ್ಲಿ ಪಡೆಯಬಹುದಾಗಿದೆ. ಹಾಗೂ ತಮ್ಮ ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

**** 

ಲೋಕಾಯುಕ್ತ ಜನ ಸಂಪರ್ಕ ಸಭೆ ಮಾ.25 ರಂದು  


ಬೆಳಗಾವಿ 17: ಗೋಕಾಕ ತಾಲೂಕ ಪಂಚಾಯತಿ ಸಭಾ ಭವನದಲ್ಲಿ ಮಾರ್ಚ್‌ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಗೋಕಾಕ ತಾಲೂಕಿನ ಎಲ್ಲಾ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. 

ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. 

ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಿ, ಸದರಿ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. 

ಹೆಚ್ಚಿನ ವಿವರಗಳಿಗಾಗಿ ಕಛೇರಿ ದೂರವಾಣಿ ಸಂಖ್ಯೆಗಳಾದ 0831-2950756, 0831-2421922 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.