ಬಾಲಕ ಕಾಣೆ: ಪತ್ತೆಗೆ ಮನವಿ

 ಬಾಲಕ ಕಾಣೆ: ಪತ್ತೆಗೆ ಮನವಿ Missing boy: Appeal to find him


ಬಾಲಕ ಕಾಣೆ: ಪತ್ತೆಗೆ ಮನವಿ 

ಬಳ್ಳಾರಿ 18: ನಗರದಲ್ಲಿ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿ.ಪ್ರವೀಣ್ ಕುಮಾರ್ ಎನ್ನುವ 16 ವರ್ಷದ ಬಾಲಕ ಫೆ.12 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. 

ಚಹರೆ ಗುರುತು: 

ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಗದ್ದ ಕೆಳಗೆ ಹಳೆ ಗಾಯದ ಗುರುತು ಇರುತ್ತದೆ. ಕನ್ನಡ, ತೆಲುಗು, ಹಿಂದಿ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.ಕಾಣೆಯಾದ ಸಂದರ್ಭದಲ್ಲಿ ಮೆರುನ್ ಬಣ್ಣದ ಟಿ-ಶರ್ಟ್‌, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಐ ಮೊ.9480803046, ಪಿಎಸ್‌ಐ ಮೊ.9480803082 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. 


ಕರ್ನಾಟಕ ಮಾಹಿತಿ ಆಯೋಗ: ದ್ವಿತೀಯ ಮೇಲ್ಮನವಿ ಅರ್ಜಿ ಕಲಬುರಗಿ ಪೀಠದಲ್ಲಿ ಸ್ವೀಕಾರ 

ಬಳ್ಳಾರಿ 18: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವಿತೀಯ ಮೇಲ್ಮನವಿ ಅರ್ಜಿಗಳು ಇನ್ನುಮುಂದೆ ಕಲಬುರಗಿ ಪೀಠದಲ್ಲಿಯೇ ಸ್ವೀಕರಿಸಲಾಗುವುದು ಎಂದು ಆಯೋಗವು ತಿಳಿಸಿದೆ.ಈ ಮುಂಚೆ ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ, ಯಾದಗಿರಿ ಜಿಲ್ಲೆಗಳು ವ್ಯಾಪ್ತಿಯಲ್ಲಿ ಸಲ್ಲಿಕೆಯಾಗುತ್ತಿದ್ದ ದ್ವೀತಿಯ ಮೇಲ್ಮನವಿಗಳು ಬೆಂಗಳೂರಿನ ಕರ್ನಾಟಕ ಮಾಹಿತಿ ಆಯೋಗದಲ್ಲಿ ಸಲ್ಲಿಸಬೇಕಿತ್ತು.ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗಲು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರು ತಮ್ಮ ಮಾಹಿತಿ ಹಕ್ಕು ಕಾಯ್ದೆ, 2005ರ ಕಲಂ 19(3) ದ್ವಿತೀಯ ಮೇಲ್ಮನವಿಗಳನ್ನು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠ, ಮಹಲ್‌-ಎ-ಶಾಹಿ ಅತಿಥಿ ಗೃಹ, ಹಳೆಯ ಪಿ.ಡಬ್ಲ್ಯೂ.ಡಿ.ಐ.ಬಿ ಅವರಣ, ರೈಲ್ವೆ ಸ್ಟೇಷನ್ ಎದುರುಗಡೆ, ಕಲಬುರಗಿ ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಪೀಠದ ಶಾಖಾಧಿಕಾರಿ (ಪ್ರಭಾರಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ 18:  

ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಆಹಾರ ವಾಹಿನಿ (ಆಹಾರಕಿಯೋಸ್ಕ್‌) ಯೋಜನೆಯಡಿ ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಹಾರ ವಾಹಿನಿ (ಆಹಾರ ಕಿಯೋಸ್ಕ್‌) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್‌ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. 

ನಿಗಮದಿಂದ ವಾಹನ ಖರೀದಿಗೆ ರೂ.03 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.ಬಳ್ಳಾರಿ ನಗರ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-(2ಎ) ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.03 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಒಳಗಿರಬೇಕು.ಈ ಮೇಲ್ಕಂಡ ಎಲ್ಲಾ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗಲಿದೆ. 

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಹಾಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.  

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಣಣಠಿ:/ಜತಛಿಟಿಜಣ.ಞಚಿಡಿಟಿಚಿಣಚಿಞಚಿ.ರಠ.ಟಿ ಮೂಲಕ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾ.03 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ನೂತನ ಜಿಲ್ಲಾಡಳಿತ ಭವನ, ಬಿ-ಬ್ಲಾಕ್, 2ನೇ ಮಹಡಿ, ಕೊಠಡಿ ಸಂ.53, ಅನಂತಪುರ ರಸ್ತೆ, ಬಳ್ಳಾರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು ಮೊ.8050770004, 8050770005 ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕ ಭಾವಿಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  

ಫೆ.19 ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಬಳ್ಳಾರಿ 18:  

ಮುಂಬರುವ ಬೇಸಿಗೆಯ ಬಿಸಿಲಿನ ತಾಪಮಾನ ನಿಭಾಯಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಫೆ.19 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಏರಿ​‍್ಡಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು  ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ. 

  

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ 18:  ಜಿಲ್ಲಾ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಆಹಾರ ವಾಹಿನಿ (ಆಹಾರಕಿಯೋಸ್ಕ್‌) ಯೋಜನೆಯಡಿ ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಕ್ರಮ ಸಂಖ್ಯೆ 1 ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ​‍್ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. 

ಆಹಾರವಾಹಿನಿ (ಆಹಾರಕಿಯೋಸ್ಕ್‌) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕುಚಕ್ರಗಳ ಇವಿ-ಗೂಡ್ಸ್‌  ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. 

ನಿಗಮದಿಂದ ವಾಹನ ಖರೀದಿಗೆ ರೂ.03 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.ಬಳ್ಳಾರಿ ನಗರ ಕ್ಷೇತ್ರದ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.03 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.ಅರ್ಜಿಯನ್ನು ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್‌ ನಲ್ಲಿರುವಂತೆ ಅರ್ಜಿದಾರರ ಹೆಸರು (ಶೀ / ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್  ಪಾಸ್  ಪುಸ್ತಕದಲ್ಲಿಯೂ ಹೊಂದಾಣಿಕೆಯಾಗಬೇಕು. 

ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.ಸರ್ಕಾರದ ವಿವೇಚನಾ ಕೋಟಾ, ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯಲು ಅರ್ಹರು.  

ಅರ್ಜಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ.06 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ(ನಿ), ಜಿಲ್ಲಾಡಳಿತ ಭವನ, ಬಿ-ಬ್ಲಾಕ್, 2ನೇ ಮಹಡಿ, ಕೊಠಡಿ ಸಂ.53, ಅನಂತಪುರ ರಸ್ತೆ, ಬಳ್ಳಾರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-29904268, 29904268 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕ ಭಾವಿಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  

ಫೆ.20 ರಂದು ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ 18:  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮಾ.01 ರಂದು ಶ್ರೀ ರೇಣುಕಾಚಾರ್ಯ ಜಯಂತಿ, ಮಾ.03 ರಂದು ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ಫೆ.20 ರಂದು ಸಂಜೆ 04.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರಿ​‍್ಡಸಲಾಗಿದೆ. 

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್‌.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.