ವ್ಯಕ್ತಿ ಕಾಣೆ: ಪತ್ತೆಗೆ ಮನವಿ

Missing person: Appeal to find him

ಲೋಕದರ್ಶನ ವರದಿ 

ವ್ಯಕ್ತಿ ಕಾಣೆ: ಪತ್ತೆಗೆ ಮನವಿ 

ಬಳ್ಳಾರಿ 03: ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೇಕ್ಷಾವಲಿ ಎನ್ನುವ 35 ವರ್ಷದ ವ್ಯಕ್ತಿಯು ಮಾ.29 ರಂದು ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್‌ಪೆಕ್ಟರ್ ಅವರು ತಿಳಿಸಿದ್ದಾರೆ. 

ಚಹರೆ ಗುರುತು: ಅಂದಾಜು 5.2 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಕ್ರೀಂ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಆಂಗ್ಲ ಭಾಷೆ ಮಾತನಾಡುತ್ತಾನೆ. 

ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192 ಅಥವಾ ಪಿಎಸ್‌ಐ ಮೊ.9480803082, ಪಿಐ ಮೊ.9480803046 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.