ವ್ಯಕ್ತಿ ಕಾಣೆ: ಪ್ರಕರಣ ದಾಖಲು
ಬಳ್ಳಾರಿ 30: ಸಿರುಗುಪ್ಪ ಪಟ್ಟಣದ ಬಸವೇಶ್ವರ ನಗರದ ನಿವಾಸಿ ಹಾಗೂ ಸಿಮೆಂಟ್ ವ್ಯಾಪಾರ ನಡೆತ್ತಿದ್ದ ಎಂ.ಸೋಮಪ್ಪ ಎನ್ನುವ 38 ವರ್ಷದ ವ್ಯಕ್ತಿ ನ.26 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
*ಕಾಣೆಯಾದ ವ್ಯಕ್ತಿಯ ಚಹರೆ:*
ಎತ್ತರ 5.6 ಅಡಿ, ದುಂಡು ಮುಖ, ಕಪ್ಪನೇ ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ ಹಾಗೂ ಕನ್ನಡ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003, ಸಿರುಗುಪ್ಪ ಉಪ ವಿಭಾಗದ ಡಿಎಸ್‌ಪಿ ದೂ.08392-276000 ಅಥವಾ ಬಳ್ಳಾರಿ ಎಸ್‌ಪಿ ಕಚೇರಿ ದೂ.08392-25400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.