ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Missing person: Request for assistance in finding him: Koppal
ಕೊಪ್ಪಳ 06 : ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಕಲ್ಲಪ್ಪ ದೇವಪ್ಪ ಉಪ್ಪಾರ ಎಂಬ 35 ವರ್ಷದ ವ್ಯಕ್ತಿಯು ಮಾರ್ಚ್ 12 ರಂದು ಸಂಜೆ 6 ಗಂಟೆಯ ಸುಮಾರಿಗೆ ಉಡುಪಿಗೆ ಕೂಲಿ ಕೆಲಸಕ್ಕಾಗಿ ತೆರಳಿದ ನಂತರ ವಾಪಸ್ ಮನೆಗೆ ಬಾರದೇ ಕಾಣೆಯಾಗಿದ್ದು, ಮೊಬೈಲ್ ಸಂಖ್ಯೆಯು ಸ್ವಿಚ್ಛ್ ಆಫ್ ಎಂದು ಬರುತ್ತಿದೆ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 126/2025 ಕಲಂ: ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:
ವ್ಯಕ್ತಿಯು 5.5 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ನೀಲಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.
ppppppಮೇಲ್ಕಂಡ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 9480803749 ಮತ್ತು 08534-220133 ಅಥವಾ ಕೊಪ್ಪಳ ಕಂಟ್ರೋಲ್ ರೂಮ್ ನಂ.08539-220222 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಯಲಬುರ್ಗಾ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ. ಕಾಣೆಯಾದ ವ್ಯಕ್ತಿಯ ಕುರಿತು ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಯಲಬುರ್ಗಾ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 