ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ-2026
Mission AIDS Safety Campaign-2026
ಲೋಕದರ್ಶನ ವರದಿ
ಗದಗ 26: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಮಿಷನ್ ಏಡ್ಸ್ ಸುರಕ್ಷಾ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಸಭೆಯು ಜರುಗಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ ಹೆಚ್.ಐ.ವಿ. ಲಕ್ಷಣಗಳನ್ನು ಗುರುತಿಸಿ, ಕ್ಯೂ-ಆರ್ ಕೋಡ್‌ನ್ನು ಸ್ಕ್ಯಾನ ಮಾಡಿ, ಹೆಚ್.ಐ.ವಿ. ಸ್ಥಿತಿಯನ್ನು ತಿಳಿದುಕೊಳ್ಳಿ ಹಾಗೂ ಹೆಚ್.ಐ.ವಿ. ಸೋಂಕಿತರಿಗೆ ಆತ್ಮ ಸ್ಥೈರ್ಯ, ಮಾನಸಿಕ ಬೆಂಬಲ ಜೊತೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕು, ಶಾಲಾ ಕಾಲೇಜುಗಳಲ್ಲಿ ಹೆಚ್.ಐ.ವಿ. ಕುರಿತು ಅರಿವು ಕಾರ್ಯಕ್ರಮಗಳನ್ನು ಮಾಡಬೇಕು. ಹೆಚ್.ಐ.ವಿ ಪೀಡಿತರಿಗೆ ತಾರತಮ್ಯವಿಲ್ಲದೆ ಬದುಕಲು ಸಹಾಯ ಮಾಡುವುದು, ಉದ್ಯೋಗ ಮತ್ತು ಶಿಕ್ಷಣಕ್ಕೆ ಬೆಂಬಲ ನೀಡಬೇಕೆಂದು ಹೇಳಿದರು.
ಮಿಷನ್ ಏಡ್ಸ್ ಸುರಕ್ಷಾ ಕಾರ್ಯಕ್ರಮದ ಗುರಿಗಳನ್ನು ಜಿಲ್ಲಾ ಮಟ್ಟದಲ್ಲಿ ಸಾಧಿಸುವ ನಿಟ್ಟಿನಲ್ಲಿ ಮೊದಲನೇ 95 ಹೆಚ್.ಐ.ವಿ. ಸೋಂಕಿತ ವ್ಯಕ್ತಿಗಳಲ್ಲಿ ಕನಿಷ್ಠ 95ಅ ಜನರು ತಮ್ಮ ಸೋಂಕಿನ ಸ್ಥಿತಿಯನ್ನು ತಿಳಿದುಕೊಳ್ಳುವುದು, ಏರಡನೇ 95 ಸೋಂಕು ಧೃಢಪಟ್ಟವರಲ್ಲಿ ಕನಿಷ್ಠ 95ಅ ಜನರು ನಿರಂತರ ಏ.ಆರ್.ಟಿ ಚಿಕಿತ್ಸೆ ಪಡೆಯುವುದು, ಹಾಗೂ ಮೂರನೇ ಹಂತದಲ್ಲಿ 99 ಏ.ಆರ್.ಟಿ ಚಿಕಿತ್ಸೆ ಪಡೆಯುವವರು 99ಅ ಜನರು ವೈರಲ್ ಲೋಡ್ ನಿಯಂತ್ರಣ ಸಾಧಿಸುವುದು. ಹೆಚ್.ಐ.ವಿ., ಸಿಫಿಲಿಸ್, ಹೆಪ್‌ಟೆಟಿಸ್ ತ್ರಿವಳಿ ರೋಗಗಳು ತಾಯಿಯಿಂದ ಮಗುವಿಗೆ ಹರಡುವುದನ್ನು ಶೂನ್ಯಗೊಳಿಸಲಾಗಿದ್ದು, ಈ ರೋಗದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಅವುಗಳನ್ನು ನಿವಾರಿಸಲು ಜಾಗೃತಿ ಮೂಡಿಸಲು, ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ತಿಳಿಸಿದರು.
ಹೆಚ್.ಐ.ವಿ. ರೋಗವನ್ನು ತಡೆಗಟ್ಟಲು ಸೋಂಕಿತರಿಗೆ ಮಾನವೀಯತೆ ತೋರಿಸುವುದೇ ಮುಖ್ಯ ಉದ್ದೇಶವಾಗಿದ್ದು ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯ ಎಲ್ಲ ಸೋಂಕಿತರ ವಿವರ ಪಡೆದು ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು, ಹೊಸ ಸೋಂಕನ್ನು ಪತ್ತೆ ಹಚ್ಚಲು ಕ್ಯೂ-ಆರ್ ಕೋಡ್ ಬಳಸಿ ನಿಮ್ಮ ಹೆಚ್.ಐ.ವಿ. ಸ್ಥಿತಿಯನ್ನು ತಿಳಿದುಕೊಳ್ಳಿ ಎನ್ನುವಂತೆ ಎಲ್ಲ ಹೆಚ್.ಆರ್.ಜಿ. ಮತ್ತು ಸಮುದಾಯವನ್ನು ಹೆಚ್.ಐ.ವಿ. ತಪಾಸಣೆ ಮಾಡಿಸುವಂತೆ ಮನವೊಲಿಸಲು ತಿಳಿಸಿದರು. ಕಾರ್ಯಕ್ರಮದ ಪ್ರಗತಿಯನ್ನು ಹೆಚ್ಚಿಸಲು ಎನ್.ಜಿ.ಓ ಸಿಬ್ಬಂದಿಯೊಂದಿಗೆ ಚರ್ಚಿಸಿದಾಗ ಸಕಾಲದಲ್ಲಿ ಅನುದಾನ ಬಿಡುಗಡೆಯಾಗುವುದಿಲ್ಲ ಎಂದು ಎನ್.ಜಿ.ಓ ಪ್ರತಿನಿಧಿ ತಿಳಿಸಿದರು, ಸದರಿ ವಿಷಯವನ್ನು ಚರ್ಚಿಸಿ ಎನ್.ಜಿ.ಓ.ಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಲು ಮೇಲಾಧಿಕಾರಿಗಳೋಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಡಿ.ಹೆಚ್.ಓ ರವರಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಎಸ್.ವಿ.ಯಾವ್.ಎಂ. ಸಂಯೋಜನಕರಾದ ಡಾ. ದೀಪಕ ರವರು 95:95:99 ಹಾಗೂ ಮಿಷನ್ ಏಡ್ಸ್ ಸುರಕ್ಷಾ ಕಾರ್ಯಕ್ರಮದ ಕುರಿತು ವಿವರವಾದ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಮಿಷನ್ ಏಡ್ಸ ಸುರಕ್ಷಾ ಅಭಿಯಾನ-2026ರ ನಿಮ್ಮ ಹೆಚ್.ಐ.ವಿ. ಸ್ಥಿತಿಯನ್ನು ತಿಳಿದುಕೊಳ್ಳಿ ಎನ್ನುವ ಕ್ಯೂ-ಆರ್ ಕೋಡ್ ಪೋಸ್ಟರನ್ನು ಬಿಡುಗಡೆ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಬಿ.ಸಿ. ಕರಿಗೌಡರ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕೆ., ಆರ್.ಸಿ.ಹೆಚ್. ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್., ಮೆಡಿಕಲ್ ಕಾಲೇಜಿನ ಡಾ. ರಮೇಶ, ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು, ಎನ್.ಜಿ.ಓ. ಸಿ.ಬಿ.ಓ. ಸಿಬ್ಬಂದಿಗಳು ಎಸ್.ವಿ.ವಾಯ್.ಎಂ. ಕೋ-ಆರ್ಡಿನೇಟರ್ ಹಾಜರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಸರ್ವರನ್ನು ಸ್ವಾಗತಿಸಿದರು. ಜಿಲ್ಲಾ ಐಸಿಟಿಸಿ ಮೇಲ್ವಿಚಾರಕರಾದ ಬಿ.ಬಿ. ಲಾಳಗಟ್ಟಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 