ಬಾಗಲಕೋಟೆ: ಮಿಷನ್ ಇಂದ್ರಧನುಷ್ ಕಾರ್ಯಕ್ರಮದಡಿ 2017-18ನೇ ಸಾಲಿಗೆ ನೂರಕ್ಕೆ ನೂರಷ್ಟು ಪ್ರಗತಿ ಸಾಧಿಸಿದ ಬಾಗಲಕೋಟೆ ಜಿಲ್ಲೆಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ದೆಹಲಿಯ ಡಾ.ಬಿ.ಆರ್.ಅಂಬೇಡ್ಕರ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ.ಹರ್ಷವರ್ಧನ ಪ್ರಶಸ್ತಿ ಪ್ರಧಾನ ಮಾಡಿದರು. ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.