ಲಕ್ನೋ ಅ, 17: ಕಾಲೇಜು ಸಮಯದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮೇಲೆ ಹೆಚ್ಚಿನ ಗಮನ ಹರಿಸುವುದನ್ನು ತಡೆಯುವ ಉದ್ದೇಶದಿಂದ ಉತ್ತರಪ್ರದೇಶದ ವಿಶ್ವವಿದ್ಯಾಲಯಗಳು, ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಈ ಕುರಿತು ಉತ್ತರ ಪ್ರದೇಶ ಉನ್ನತ ಶಿಕ್ಷಣ ನಿರ್ದೇಶನಾಲಯ ಆದೇಶ ಜಾರಿ ಮಾಡಿದೆ. ರಾಜ್ಯಾದ್ಯಂತ ಕಾಲೇಜು ಮತ್ತು ವಿಶ್ವವಿದ್ಯಾನಿಲಯದ ಆವರಣದೊಳಗೆ ಮೊಬೈಲ್ ಫೋನ್ ಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಉನ್ನತ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ಇದು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಕಾಲೇಜುಗಳ ಉಪನ್ಯಾಸಕರಿಗೂ ಈ ಮೊಬೈಲ್ ನಿಷೇಧ ಅನ್ವಯವಾಗಲಿದೆ ಎಂದೂ ಪ್ರಕಟಣೆ ತಿಳಿಸಿದೆ.