ಕಾರ್ಮಿಕರಿಗೆ ಆರೋಗ್ಯ ಘಟಕದ ಸಂಚಾರಿ ವಾಹನ- ಪಠಾಣ
Mobile health unit for workers - Pathanamthitta
ಲೋಕದರ್ಶನ ವರದಿ
ಕಾರ್ಮಿಕರಿಗೆ ಆರೋಗ್ಯ ಘಟಕದ ಸಂಚಾರಿ ವಾಹನ- ಪಠಾಣ
ಶಿಗ್ಗಾವಿ 07 : ಬಡವರು, ಕೂಲಿಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳುಳ್ಳ ಆರೋಗ್ಯ ಘಟಕದ ಸಂಚಾರಿ ವಾಹನಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಯಾಸೀರಖಾನ ಪಠಾನ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಂಚಾರಿ ಘಟಕದಲ್ಲಿ ತಪಾಸಣೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಾಗಲಿದೆ. ಕಾರ್ಮಿಕರ ಆರೋಗ್ಯ ಸೇವೆಗಾಗಿ, ಅವರಿರುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಓಷಧೋಪಚಾರ ಮತ್ತು ತುರ್ತು ಆರೋಗ್ಯ ಸೇವೆಗಳನ್ನು ಈ ವಾಹನ ಒದಗಿಸುತ್ತವೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮೀತಿ ಉಪಾಧ್ಯಕ್ಷ ಗುಡಪ್ಪ ಜಲದಿ, ಸವಣೂರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಜೆ ಮುಲ್ಲಾ, ತಾಲೂಕಾ ಗ್ಯಾರಂಟಿ ಸಮೀತಿ ಅಧ್ಯಕ್ಷ ಎಸ್ ಎಫ್ ಮಣಕಟ್ಟಿ, ಪುರಸಭೆ ಸದಸ್ಯ ಗೌಸಖಾನ್ ಮುನಶಿ, ಮುಖಂಡರಾದ ಚಂದ್ರು ಕೊಡ್ಲಿವಾಡ, ಮುನ್ನಾ ಲಕ್ಷ್ಮೇಶ್ವರ ಸೇರಿದಂತೆ ಕಾಂಗ್ರೇಸ್ ಮುಖಂಡರು, ರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 