ಮೊಬೈಲ್ ಪವರ್ ಬ್ಯಾಂಕ್ ಬ್ಲಾಸ್ಟ್ : ಯುವಕ ಗಂಭೀರ ಗಾಯ
Mobile power bank blast: Youth seriously injured
ಜಮಖಂಡಿ ೨೪: ನಗರದ ಬಸ್ ನಿಲ್ದಾಣದ ಬಳಿ ಇರುವ ಎಟಿಎಂ ಕೇಂದ್ರದ ಸಮೀಪ ಯುವಕನೊಬ್ಬನ ಜೇಬಿನಲ್ಲಿದ್ದ ಮೊಬೈಲ್ ಪವರ್ ಬ್ಯಾಂಕ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಡೆದಿದೆ.
ನಗರದ ಕುಬೇರ ಹಿಂಭಾಗದ ನಿವಾಸಿ ಸಿದ್ದು ರಾಮು ಸಾಳೋಂಕಿ (೨೧) ಎಂಬ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ. ಸಿದ್ದು ರಾಮು ಸಾಳೋಂಕಿ ಬಸ್ ನಿಲ್ದಾಣದ ಒಳಭಾಗದಲ್ಲಿರುವ ಎಟಿಎಂಗೆ ತೆರಳಿ ಹಣ ಪಡೆಯಲು ಮುಂದಾಗಿದ್ದ ವೇಳೆ ಅವರ ಜೇಬಿನಲ್ಲಿದ್ದ ಮೊಬೈಲ್ ಪವರ್ ಬ್ಯಾಂಕ್ ಏಕಾಏಕಿ ಬ್ಲಾಸ್ಟ್ ಆಗಿದೆ ಎನ್ನಲಾಗಿದೆ.
ಸ್ಫೋಟದ ಪರಿಣಾಮ ಯುವಕನ ಕಾಲು, ತೊಡೆ ಹಾಗೂ ಹೊಟ್ಟೆ ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸರಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಘಟನೆಯಿಂದ ಕೆಲಕಾಲ ಬಸ್ ನಿಲ್ದಾಣದ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 