ವಿದ್ಯಾರ್ಥಿಗಳಿಂದ ವಿಧಾನಸಭೆ ಕಲಾಪದ ಪ್ರದರ್ಶನ
Mock Legislative Assembly session by students
ವಿದ್ಯಾರ್ಥಿಗಳಿಂದ ವಿಧಾನಸಭೆ ಕಲಾಪದ ಪ್ರದರ್ಶನ
ವಿಜಯಪುರ 11: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಸೆ. 15 ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ತಿಳಿಸಿದರು.
ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ಯುವಕರಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿ ಮಾನವ ಸರಪಳಿ ಹಾಗೂ ಬೈಕ್ ರಾ್ಯಲಿಗಳ ಬದಲಾಗಿ ಯುವ ಸಂಸತ್ತು ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸೆ.15ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ತಿಳಿಸಿದ್ದಾರೆ.
ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ವಿದ್ಯಾರ್ಥಿಗಳ ಆಯ್ಕೆ, ತರಬೇತಿ, ಪೂರ್ವಾಭ್ಯಾಸ ಹಾಗೂ ಯುವ ಸಂಸತ್ತಿನ ಕಲಾಪಗಳನ್ನು ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ನಿರ್ದೇಶನ ನೀಡಿದರು.
ವೀಡಿಯೊ ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ವಡ್ಡರ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ವಿಜಯಕುಮಾರ ಆಜೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 