ಅಣಕು ಪ್ರದರ್ಶನಅಗ್ನಿ ಅವಘಡ ತಡೆಗಟ್ಟುವಿಕೆ ಕುರಿತು ಸಾರ್ವಜನಿಕರು ಜಾಗೃತಿ ಹೊಂದಬೇಕು: ಕೆ.ತಿಮ್ಮಾರೆಡ್ಡಿ

Mock fire show: Public should be made aware of fire accident prevention: K. Thimmareddy

 ಅಣಕು ಪ್ರದರ್ಶನಅಗ್ನಿ ಅವಘಡ ತಡೆಗಟ್ಟುವಿಕೆ ಕುರಿತು ಸಾರ್ವಜನಿಕರು ಜಾಗೃತಿ ಹೊಂದಬೇಕು: ಕೆ.ತಿಮ್ಮಾರೆಡ್ಡಿ

ಬಳ್ಳಾರಿ 19 :ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಶನಿವಾರ ಅಗ್ನಿ ಅವಘಡ ತಡೆಗಟ್ಟುವಿಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ಅಣಕು ಪ್ರದರ್ಶನ ನಡೆಯಿತು. 

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ.ತಿಮ್ಮಾರೆಡ್ಡಿ ಅವರು ಮಾತನಾಡಿ, ಸಾರ್ವಜನಿಕರು ತಮ್ಮ ಸುತ್ತ-ಮುತ್ತ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಲ್ಲಿ ಅದರ ತಡೆಗಟ್ಟುವಿಕೆ ಕುರಿತು ಅರಿವು ಹೊಂದಬೇಕು ಎಂದು ಹೇಳಿದರು.ಆಸ್ಪತ್ರೆಗಳು ಅತ್ಯಂತ ಸೂಕ್ಷ್ಮ ಸ್ಥಳಗಳು. ಆರೋಗ್ಯ ಸಿಬ್ಬಂದಿಗಳು ಜಾಗರೂಕತೆ ಹೊಂದಿರಬೇಕು. ಬೆಂಕಿ ನಂದಿಸುವ ಸಾಧನಗಳು ಸುವ್ಯವಸ್ಥೆಯಲ್ಲಿ ಇಟ್ಟುಕೊಳ್ಳಬೇಕು. ಅಗ್ನಿಶಾಮಕ ದಳದವರು 24 ಗಂಟೆಯೂ ಸೇವೆ ನೀಡುತ್ತಾರೆ. ಅಗ್ನಿ ದುರಂತ, ತುರ್ತು ಸೇವೆಗಳಿಗಾಗಿ ಸದಾ ಸನ್ನದ್ಧರಾಗಿರುತ್ತಾರೆ ಎಂದು ತಿಳಿಸಿದರು.ಇದೇ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದರು.ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್ ಅವರು ಮಾತನಾಡಿ, ಪ್ರತಿ ವರ್ಷ ಏಪ್ರಿಲ್ 14 ರಿಂದ 20 ರ ವರೆಗೆ ದೇಶದಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹವನ್ನು ಆಚರಿಸಿ ಸಾರ್ವಜನಿಕರಿಗೆ ಅಗ್ನಿ ಸುರಕ್ಷತೆ ಕುರಿತು ತಿಳುವಳಿಕೆ ನೀಡಿ ಅಣಕು ಪ್ರದರ್ಶನ ನಡೆಸಲಾಗುತ್ತದೆ ಎಂದು ಹೇಳಿದರು. 

ಬಳಿಕ ಅಗ್ನಿಶಾಮಕ ಅಧಿಕಾರಿಗಳ ತಂಡ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್‌.ಬಸರೆಡ್ಡಿ ಅವರ ನೇತೃತ್ವದಲ್ಲಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳ ತಂಡ ರಚಿಸಿ, ಕುತೂಹಲಕಾರಿಯಾಗಿ ಅಣಕು ಪ್ರದರ್ಶನ ನಡೆಸಲಾಯಿತು. 

ಅಣಕು ಪ್ರದರ್ಶನದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಲ್ಲಿ ಬಳಸಬಹುದಾದ ಬೆಂಕಿ ನಂದಿಸುವ ಸಾಧನಗಳು, ಅಗ್ನಿ ಸಂಭವಿಸಿದ ಸ್ಥಳದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸುವುದು, ಪ್ರಥಮ ಚಿಕಿತ್ಸೆ ಹಾಗೂ ಇತರೆ ಕ್ರಮಗಳ ಕುರಿತು ಪರಿಪೂರ್ಣ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಗುರುನಾಥ ಬಿ.ಚೌವ್ಹಾಣ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರೀವೀಕ್ಷಕ ಪರಮೇಶ್ವರ್, ಅಗ್ನಿಶಾಮಕ ಠಾಣಾಧಿಕಾರಿ ದಯಾನಂದ ಗೌಡ, ಜಿಲ್ಲಾ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಗುಮಾಸ್ತೆ ದೇಸಾಯಿ, ಶೂಶ್ರುಷಣಾ ಅಧೀಕ್ಷಕಿ ವಿಮಲಾಕ್ಷಿ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ಶೂಶ್ರುಷಕರು, ಅಧೀನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು