ವಿದ್ಯಾರ್ಥಿಗಳಿಗೆ ಅಣಕು ಸುದ್ದಿಗೋಷ್ಠಿ
Mock press conference for students
ಬಾಗಲಕೋಟೆ 30: ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸುದ್ದಿಗೋಷ್ಠಿ ಕುರಿತು ಪ್ರಾಯೋಗಿಕ ಮಾಹಿತಿ ನೀಡುವ ಉದ್ದೇಶದಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಅಣಕು ಸುದ್ದಿಗೋಷ್ಠಿಯನ್ನು ಹಮ್ಮಿಕೊಳ್ಳಲಾಯಿತು.
ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ಕಾಲ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳ ಕುರಿತು ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಎಸ್.ಡಿ ಕೆಂಗಲಗುತ್ತಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಮತ್ತು ಕರ್ನಾಟಕವನ್ನು ಆಳಿದ ರಾಜ ಮನೆತನಗಳ ಲಾಂಛನಗಳ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಂಡಿರುವುದರ ಕುರಿತು ಮತ್ತು ಕಾರ್ಯಕ್ರಮದ ರೂಪರೇಷೆ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಸುದ್ದಿಗೋಷ್ಠಿಯಲ್ಲಿ ವರದಿಗಾರರಾಗಿ ಭಾಗವಹಿಸಿ ಸಂವಾದ ನಡೆಸಿದರು.
ಅಣುಕು ಸುದ್ದಿಗೋಷ್ಠಿಯ ಬಳಿಕ ಪ್ರಾಚಾರ್ಯರಾದ ಎಸ್.ಆರ್ ಮೂಗನೂರಮಠ ಅವರು ಮಾತನಾಡಿ ಇಂತಹ ಪ್ರಾಯೋಗಿಕ ಚಟುವಟಿಕೆಗಳನ್ನು ಪತ್ರಿಕೋದ್ಯಮ ವಿಭಾಗ ತುಂಬಾ ಉತ್ತಮವಾಗಿ ನಡೆಸುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಪಶ್ನೆಗಳನ್ನು ಕೇಳುವ ಛಾತಿ ಬೆಳೆಯುತ್ತದೆ. ಭಾವಿ ಪತ್ರಕರ್ತರಾದ ನಿಮ್ಮಲ್ಲಿ ಸುದ್ದಿಗೋಷ್ಠಿಯ ಸೂಕ್ಷ್ಮತೆಯ ಕಡೆಗೆ ಗಮನ ಇರಬೇಕು. ವಿದ್ಯಾರ್ಥಿಗಳಲ್ಲಿ ಗತಪ್ರಾತ್ಯಾಗತದ ಅರಿವು ಅಗತ್ಯ. ಹೊಸ ವಿಷಯಗಳನ್ನು ಗುರುತಿಸುವ ಸಾಮರ್ಥ್ಯ ಹೊಂದಿರಬೇಕು. ಒಂದು ಸಮರ್ಥ ಪತ್ರಕರ್ತರ ಗುಂಪು ಸೇರಿದರೆ ಒಬ್ಬ ವ್ಯಕಿಯನ್ನು ಹೇಗೆ ತಡೆಗಟ್ಟುತ್ತಾರೆ ಅನ್ನುವುದು ಮುಖ್ಯ. ಹಾಗೆಯೇ ವಿದ್ಯಾರ್ಥಿಗಳಿಗೆ ಕಲಿಯಬೇಕೆಂಬ ಆಸಕ್ತಿ ಇದ್ದರೆ, ನಮ್ಮ ಮಹಾವಿದ್ಯಾಲಯದಲ್ಲಿ ಪ್ರತಿನಿತ್ಯವೂ ವಿವಿಧ ಸ್ಪರ್ಧಾತ್ಮಕ ತರಬೇತಿಯನ್ನು ಪ್ರಾರಂಭಿಸಬೇಕು ಎನ್ನುವ ಯೋಚನೆಯಲ್ಲಿದ್ದೇವೆ ಎಂದರು.
ಅಣಕು ಸುದ್ದಿಗೋಷ್ಠಿಯಲ್ಲಿ ಕಲಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಆರ್. ನಾಗರಾಜು, ಸ್ನಾತಕೋತ್ತರ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವೀಣಾ ಕಲ್ಮಠ, ಸಾಂಸ್ಕೃತಿಕ ಚಟುವಟಿಕೆ ಸಂಯೋಜಕರಾದ ಡಾ. ಕೆ.ವಿ.ಮಠ, ಪ್ಲೇಸಮೆಂಟ್ ಸೆಲ್ ಅಧಿಕಾರಿಗಳಾದ ಎಸ್.ವಿ. ಕಟ್ಟಿ, ಪ್ರಾಧ್ಯಾಪಕರುಗಳಾದ ಐ.ಬಿ ಚಿಕ್ಕಮಠ, ಮಹಾಂತೇಶ ದೊಡವಾಡ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 