ಮೋದಿ 25 ವರ್ಷಗಳ ಸಾರ್ವಜನಿಕ ಸೇವೆ: ನಿರಾಣಿ
Modi's 25 years of public service: Nirani
ಲೋಕದರ್ಶನ ವರದಿ
ಬೀಳಗಿ 29: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆ ಮತ್ತು ಸುಶಾಸನದಲ್ಲಿ 25 ವರ್ಷಗಳ ಪಯಣ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಮುರುಗೇಶ ನಿರಾಣಿ ಹೇಳಿದರು.
ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೀಳಗಿ ಮಂಡಲದ ವತಿಯಿಂದ ಆಯೋಜಿಸಿದ್ದ ‘ಸೇವಾ ಸಂಕಲ್ಪ ಅಭಿಯಾನ’ದಲ್ಲಿ ಮಾತನಾಡಿದ ಅವರು, ಮೋದಿ ಅವರ ಜನಪರ ಕಲ್ಯಾಣ ಯೋಜನೆಗಳು ಹಾಗೂ ರಾಷ್ಟ್ರೀಯ ಸಂಕೇತಗಳನ್ನು ರಂಗೋಲಿ ಚಿತ್ರಕಲೆಯಲ್ಲಿ ಪ್ರದರ್ಶಿಸುವ ಮೂಲಕ ಅಭಿಯಾನ ನಡೆಸಲಾಗುತ್ತಿದೆ ಎಂದರು.
2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ಆರಂಭವಾದ ಮೋದಿ ಅವರ ರಾಜಕೀಯ ಪಯಣವು 25 ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಸುಶಾಸನ, ಅಭಿವೃದ್ಧಿ ಹಾಗೂ ಜನಕಲ್ಯಾಣ ಕ್ಷೇತ್ರಗಳಲ್ಲಿ ಹಲವು ಬದಲಾವಣೆಗಳಾಗಿವೆ ಎಂದು ನಿರಾಣಿ ಹೇಳಿದರು.
ಮೋದಿ ಅವರ ಜನಸೇವೆಯ ಪ್ರೇರಣೆಯಿಂದ ‘ವಿಕಸಿತ ಹಾಗೂ ಆತ್ಮನಿರ್ಭರ ಭಾರತ’ ನಿರ್ಮಾಣದ ಗುರಿಯತ್ತ ಸಾಗಲು ಕಾರ್ಯಕರ್ತರು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು. ಪ್ರಧಾನಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಮಿಥುನ್ ನಾಯಕ್, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಠ್ಠಲ ಯತ್ನಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ದಾಕ್ಷಾಯಣಿ ಜಂಬಗಿ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಛಬ್ಬಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 