ಮೋದಿ ಸಾಧನೆಗಳು ದೇಶದ ಅಭಿವೃದ್ಧಿಗೆ ಹೊಸ ದಿಕ್ಕು : ಶಾಸಕ ಗಾಲಿ ಜನಾರ್ದನ ರೆಡ್ಡಿ
Modi's achievements are a new direction for the country's development: MLA Gali Janardhana Reddy
ಕೊಪ್ಪಳ 15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಅನೇಕ ಐತಿಹಾಸಿಕ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಬಡವರು, ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರ ಜೀವನಮಟ್ಟವನ್ನು ಸುಧಾರಿಸುವಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು. ಕೊಪ್ಪಳ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕತೆ ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದ್ದು, ಭಾರತವು ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ.
ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಉಚಿತ ಆಹಾರ ಧಾನ್ಯ ವಿತರಣೆ, ಮಹಿಳಾ ಸಬಲೀಕರಣ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರಲಾಗಿದೆ ಎಂದು ತಿಳಿಸಿದರು. ಮೋದಿಯವರ ಆಡಳಿತದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆ, ರೈಲ್ವೆ ಆಧುನೀಕರಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ, ವಂದೇ ಭಾರತ್ ರೈಲುಗಳ ಸಂಚಾರ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಭಾರತ ಇಂದು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ಆತ್ಮನಿರ್ಭರ ಭಾರತದ ಕನಸನ್ನು ನನಸಾಗಿಸುವ ದಿಕ್ಕಿನಲ್ಲಿ ದೇಶ ಮುನ್ನಡೆಯುತ್ತಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 