ನವದೆಹಲಿ, ಫೆ 3,ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರ ಕಣ ರಂಗೇರುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಮೊದಲ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ,ಪ್ರಚಾರ ಬಿರುಸುಗೊಳ್ಳುತ್ತಿದೆ ನಾಯಕರ ಆರೋಪ - ಮತ್ತು ಪ್ರತ್ಯಾರೋಪ ತಾರಕಕ್ಕೆ ಮುಟ್ಟುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ದೆಹಲಿಯ ಕಾರ್ಕಾರ್ಡೂಮಾ ಪ್ರದೇಶದಲ್ಲಿ ಸೋಮವಾರ ತಮ್ಮ ದೆಹಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಇದೇ ಶನಿವಾರ ದೆಹಲಿ ವಿಧಾನಸಭೆಗೆ ಮತದಾನ ನಡೆಯಲಿದೆ .