ನೆಹರು ಪತ್ರ ಉಲ್ಲೇಖಿಸಿ ಮೋದಿ ನೀಡಿದ ಹೇಳಿಕೆ ಸುಳ್ಳು
Modi's statement quoting Nehru's letter is false
ನವದೆಹಲಿ: ವಂದೇ ಮಾತರಂ ಕುರಿತು ಲೋಕಸಭಾ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ ಕಾಂಗ್ರೆಸ್ ಮತ್ತು ನಾಜಿ ಪ್ರಧಾನಿ ನೆಹರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು.ವಿಪಕ್ಷದ ಪರವಾಗಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಎರಡು ಕಾರಣಕ್ಕಾಗಿ ಚರ್ಚೆ ನಡೆಸಲಾಗುತ್ತಿದೆ, ನೆಹರು ಬರೆದಿದ್ದಾರೆ ಎನ್ನಲಾದ ಪತ್ರದ ವಿಚಾರದಲ್ಲಿ ಪ್ರಧಾನಿ ಮೋದಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
‘ವಂದೇ ಮಾತರಂ’ಗೆ 150 ವರ್ಷಗಳ ಸಂದರ್ಭದ ಚರ್ಚೆ ವೇಳೆ ಪ್ರಧಾನಿ ಮೋದಿ ಅವರು ಮಾತನಾಡಿದ ಬಳಿಕ ಮಾತನಾಡಿದ ಪ್ರಿಯಂಕಾ "ಇಂದು ಸದನದಲ್ಲಿ ವಂದೇ ಮಾತರಂ ಕುರಿತು ಚರ್ಚೆ ನಡೆಯಲು ಎರಡು ಕಾರಣಗಳಿವೆ. ಒಂದು, ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು ಬರುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ, ನಮ್ಮ ಪ್ರಧಾನಿ ತಮ್ಮ ಪಾತ್ರವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ” ಎಂದರು. ”ಎರಡನೆಯದಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದವರು, ದೇಶಕ್ಕಾಗಿ ತ್ಯಾಗ ಮಾಡಿದವರ ಮೇಲೆ ಈ ಸರಕಾರ ವು ಹೊಸ ಆರೋಪಗಳನ್ನು ಹೇರಲು ಅವಕಾಶವನ್ನು ಬಯಸುತ್ತಿದೆ.ಹಾಗೆ ಮಾಡುವುದರ ಮೂಲಕ, ಸರಕಾರವು ಸಾರ್ವಜನಿಕರಿಗೆ ಸಂಬಂಧಿಸಿದ ಅಗತ್ಯ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆ ಸೆಳೆಯಲು ಬಯಸುತ್ತಿದೆ" ಎಂದರು.
’ವಂದೇ ಮಾತರಂನ ಮೂಲವು ಮುಸ್ಲಿಮರನ್ನು ಪ್ರಚೋದಿಸಬಹುದು’ ಎಂದು ಜವಾಹರಲಾಲ್ ನೆಹರು ಸುಭಾಷ್ ಚಂದ್ರ ಬೋಸ್ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ತಳ್ಳಿಹಾಕಿದ ಪ್ರಿಯಾಂಕಾ ’ಪ್ರಧಾನಿ ಈ ಹಿಂದೆ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ ಆ ಪತ್ರದಿಂದ ಆಯ್ದ ಭಾಗಗಳನ್ನು ಉಲ್ಲೇಖಿಸಿದ್ದಾರೆ’ ಎಂದು ಹೇಳಿದ್ದಾರೆ.
”ವಂದೇ ಮಾತರಂ ಉಳಿದ ಚರಣಗಳ ವಿರುದ್ಧದ ಆಕ್ಷೇಪಣೆಯನ್ನು ಕೋಮುವಾದಿಗಳು ನಿರ್ಮಿಸಿದ್ದಾರೆ" ಎಂದು ಬರೆದುದನ್ನು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಲಿಲ್ಲ ಎಂದು ಪ್ರಿಯಂಕಾ ಹೇಳಿದರು. ”ಈ ಗೀತೆ ದೇಶದ ಪ್ರತಿಯೊಂದು ಭಾಗದಲ್ಲೂ ಜೀವಂತವಾಗಿರುವುದರಿಂದ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕಾದ ಅಗತ್ಯವಿಲ್ಲ” ಎಂದು ಪ್ರಿಯಾಂಕಾ ಹೇಳಿದರು. ಕಾಂಗ್ರೆಸ್ನ ಇತರ ಸಂಸದರು ಮತ್ತು ಕೆಲ ಮಿತ್ರಪಕ್ಷದ ಸಂಸದರು ಬಿಜೆಪಿ ನೆಹರು ಅವರ ಅಭಿಪ್ರಾಯಗಳನ್ನು ವಿರೂಪಗೊಳಿಸುತ್ತಿದೆ ಎಂದು ಆರೋಪಿಸಿದರು.
"ಜಿನ್ನಾ ವಂದೇ ಮಾತರಂಗೆ ವಿರೋಧ ವ್ಯಕ್ತಪಡಿಸಿದ ನಂತರ ಪಂಡಿತ್ ಜವಾಹರಲಾಲ್ ನೆಹರು ಸುಭಾಷ್ ಚಂದ್ರ ಬೋಸ್ ಅವರಿಗೆ ಪತ್ರ ಬರೆದು, ಅದರಲ್ಲಿ ವಂದೇ ಮಾತರಂನ ಹಿನ್ನೆಲೆಯನ್ನು ತಾವು ಓದಿದ್ದೇನೆ ಮತ್ತು ಅದು ಮುಸ್ಲಿಮರನ್ನು ಕೆರಳಿಸಬಹುದು ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಅವರ ಬಂಗಾಳದಲ್ಲಿಯೂ ವಂದೇ ಮಾತರಂ ಬಳಕೆಯನ್ನು ಪರೀಶೀಲಿಸುವುದಾಗಿ ಹೇಳಿದ್ದರು" ಎಂದು ಮೋದಿ ಹೇಳಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 