ಕೊರೊನಾ ವಾರಿಯರ್ಸ್ ಗಳಿಗೆ ಮೋದಿಯಿಂದ ವಿಶೇಷ ಪ್ಯಾಕೇಜ್ ಘೋಷಣೆ?

ನವದೆಹಲಿ,  ಮೇ 7,  ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೊರೊನಾ ವಾರಿಯರ್ಸ್ ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದ ಜನತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೊರೊನಾ ವಾರಿಯರ್ಸ್ ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೆ ವಿಶೇಷ ಪ್ಯಾಕೇಜ್ ಸೇರಿದಂತೆ ಲಾಕ್ ಡೌನ್ ಸಡಿಲಿಕೆ ಕುರಿತು  ಮಾತನಾಡುವ ಸಾಧ್ಯತೆ ಇದೆ ಎಂದೂ  ಹೇಳಲಾಗಿದೆ.