ನವದೆಹಲಿ, ಆಗಸ್ಟ್ 17 ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಳ್ಳಲಿದ್ದು, ಉಭಯ ದೇಶಗಳ ನಡುವೆ ಕನಿಷ್ಠ ಹತ್ತು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ.
ಅಧಿಕೃತ ಮೂಲಗಳ ಪ್ರಕಾರ, ರುಪೇ ಕಾರ್ಡ್ಬಿಡುಗಡೆ, ಐದು ದಶಕಗಳ ಭಾರತ-ಭೂತಾನ್ ಜಲಶಕ್ತಿ ಸಹಕಾರದ ನೆನಪಿಗಾಗಿ ಅಂಚೆಚೀಟಿ ಬಿಡುಗಡೆ ಮತ್ತು ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ಪ್ರವಾಸ ಹೇಳಿಕೆ ನೀಡಿದ ಅವರು ನಮ್ಮ ದ್ವಿಪಕ್ಷೀಯ ಸಂಬಂಧ ಕುರಿತು ಭೂತಾನ್ ಪ್ರಧಾನ ಮಂತ್ರಿಗಳೊಂದಿಗೆ ಫಲಪ್ರದ ಚರ್ಚೆ ನಡೆಸಲು ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಈ ಅವಧಿಯಲ್ಲಿ ಅವರು ಭೂತಾನ್ನ ಪ್ರತಿಷ್ಠಿತ ರಾಯಲ್ ವಿಶ್ವವಿದ್ಯಾನಿಲಯದಲ್ಲಿ ಯುವ ಭೂತಾನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮ್ಮ ಭೇಟಿಯು ಭೂತಾನ್ನೊಂದಿಗಿನ ಸ್ನೇಹವನ್ನು ಮತ್ತಷ್ಟು ಉತ್ತೇಜಿಸಲಿದೆ ಎರಡೂ ದೇಶಗಳ ಜನರ ಸಮೃದ್ಧ ಭವಿಷ್ಯ ಮತ್ತು ಪ್ರಗತಿಗೆ ಭದ್ರ ಬುನಾದಿ ಹಾಕಲಿದೆ ಎಂಬ ವಿಶ್ವಾಸವಿದೆ ಎಂದೂ ಪ್ರಧಾನಿ ಹೇಳಿದರು.
ಉಭಯ ದೇಶಗಳು ಕಳೆದ ವರ್ಷ ಔಪಚಾರಿಕ ರಾಜತಾಂತ್ರಿಕ ಸಂಬಂಧಗಳ ಸುವರ್ಣ ಮಹೋತ್ಸವವನ್ನು ಜಂಟಿಯಾಗಿ ಆಚರಿಸಿಕೊಂಡಿವೆ. ಭಾರತ-ಭೂತಾನ್ ಸಹಭಾಗಿತ್ವ ನೆರೆಹೊರೆಯ ಪ್ರಥಮ' ನೀತಿಯ ಪ್ರಮುಖ ಆಧಾರಸ್ತಂಭವಾಗಿದೆ ಎಂದು ಮೋದಿ ಹೇಳಿದ್ದಾರೆ. .