ಕೃಷಿ ಸಖ್ಯರಿಗೆ ಮಾಡ್ಯೂಲ್-4 ತರಬೇತಿ
Module-4 Training for Krishi Sakhis
ಲೋಕದರ್ಶನ ವರದಿ
ನೇಸರಗಿ, ಜು.14: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್ ಬೆಳಗಾವಿ ಹಾಗೂ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖ್ಯರಿಗೆ ಆರು ದಿನಗಳ ಮಾಡ್ಯೂಲ್-4 ತರಬೇತಿ ಕಾರ್ಯಕ್ರಮವನ್ನು ಮತ್ತಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆರಂಭಿಸಲಾಯಿತು.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಮಾತನಾಡಿ, ಕೃಷಿ ಸಖ್ಯರು ರೈತರಿಗೆ ಕೃಷಿ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವ ಹಾಗೂ ಕೃಷಿಯನ್ನು ಲಾಭದಾಯಕವಾಗಿಸಲು ನೆರವಾಗುವ ಪ್ರಮುಖ ಕೊಂಡಿಯಾಗಿದ್ದಾರೆ ಎಂದು ತಿಳಿಸಿದರು. ಕೃಷಿ ಸಖ್ಯ ಯೋಜನೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ ಪರಿಕಲ್ಪನೆಯಾಗಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿಯನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಜೋಡಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎಸ್.ಎಂ. ವಾರದ ಮಾತನಾಡಿ, ಕೃಷಿ ಸಖ್ಯರು ರೈತರು, ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆಗಳ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸಾಮರ್ಥ್ಯವನ್ನು ವೃದ್ಧಿಸಲು ಈ ತರಬೇತಿ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿಗಳಾದ ಡಾ. ಎಸ್.ಎಸ್. ಹಿರೇಮಠ, ಪ್ರವೀಣ ಯಡಹಳ್ಳಿ, ಡಾ. ಭಾವಿನಿ ಪಾಟೀಲ್ ಹಾಗೂ ಶಂಕರಗೌಡ ಪಾಟೀಲ್ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 