ಜೆಡಿಎಸ್ ಹಾವೇರಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ನೂರುಲ್ ಹಸನ್ ಖಾಜೇಖಾನ್ ನೇಮಕ
Mohammad Nurul Hasan Khajekhan appointed as the president of JDS Haveri district minority unit
ಶಿಗ್ಗಾಂವಿ, ಆ. 10: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಹಾವೇರಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಶಿಗ್ಗಾಂವಿ ಪಟ್ಟಣದ ಮುಖಂಡ ಮೊಹಮ್ಮದ್ ನೂರುಲ್ ಹಸನ್ ಖಾಜೇಖಾನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹಾವೇರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ತಿಳಿಸಿದ್ದಾರೆ.
ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದರ ಜತೆಗೆ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಾವೇರಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ನೂತನ ಜಿಲ್ಲಾಧ್ಯಕ್ಷರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿ.ಸಿ. ಗುಡಿಶೆಟ್ಟರ, ಈರಣ್ಣ ನವಲಗುಂದ, ಇಶಾಕ್ ಪಟೇಲ್, ರೆಹಮತುಲ್ಲಾಖಾನ್ ಪಠಾಣ್, ರಾಜು ಮಾಳವದೆ, ಸಂಜೀವ ಮಣ್ಣಣ್ಣವರ ಸೇರಿದಂತೆ ಜಿಲ್ಲಾ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 