ಮುಂಗಾರು ಮಳೆ ಮುನ್ನಚ್ಚರಿಕೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ
Monsoon rain precautions and drinking water problems are essential
ಲೋಕದರ್ಶನ ವರದಿ
ಧಾರವಾಡ 12: ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಪ್ರದೇಶದಲ್ಲಿ ಪ್ರಸ್ತುತ 21 ಗ್ರಾಮಗಳಲ್ಲಿ 25 ಖಾಸಗಿ ಕೊಳವೆಬಾವಿ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ಟ್ಯಾಂಕರ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ. ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ಮಲಪ್ರಭ ಜಲಾಶಯದಿಂದ ಕಾಲುವೆಗಳ ಮುಖಾಂತರ 60 ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಸದರಿ ತಾಲ್ಲೂಕಿನಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 