ಮುಂಗಾರು ಹಂಗಾಮು ಸಿದ್ಧತೆ: ಬಳ್ಳಾರಿ ಜಿಲ್ಲೆಯಲ್ಲಿ ಚುರುಕುಗೊಂಡ ಕೃಷಿ ಚಟುವಟಿಕೆಗಳು
Monsoon season preparations: Agricultural activities have intensified in Bellary district
ಲೋಕದರ್ಶನ ವರದಿ
ಬಳ್ಳಾರಿ 02: ಜಿಲ್ಲೆಯಲ್ಲಿ ಮುಂಗಾರು ಪೂರ್ವದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಸಾಗರೋತ್ತರ ವೇಗವನ್ನು ಪಡೆದುಕೊಂಡಿದ್ದು, ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಪ್ರಸ್ತುತ ಲಭ್ಯವಿರುವ ಉತ್ತಮ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತಮ್ಮ ಕೃಷಿ ಭೂಮಿಯನ್ನು ಹದಗೊಳಿಸುವ ಕಾರ್ಯಗಳಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದಾರೆ. ರಂಟೆ-ಕುಂಟೆ ಹೊಡೆಯುವುದು, ರೋಟವೇಟರ್ ಹಾಗೂ ಎತ್ತುಗಳ ನೇಗಿಲು ಬಳಸಿ ಭೂಮಿಯನ್ನು ಹದಗೊಳಿಸುವ ದೃಶ್ಯಗಳು ಜಿಲ್ಲೆಯಾದ್ಯಂತ ಸಾಮಾನ್ಯವಾಗುತ್ತಿವೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆಯು 599.0 ಮಿ.ಮೀ ಆಗಿರುತ್ತದೆ. ಮೇ 31ರ ಅಂತ್ಯಕ್ಕೆ ಸರಾಸರಿ ವಾಡಿಕೆ ಮಳೆಯು 74.4 ಮಿ.ಮೀ ಇರಬೇಕಾಗಿದ್ದು, ಪ್ರಸ್ತುತ 72.4 ಮಿ.ಮೀ ನಷ್ಟು ಉತ್ತಮ ಮಳೆಯಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ. ಸೋಮಸುಂದರ್ ಅವರು ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 