ನಿವೃತ್ತ ನೌಕರರ ಸಂಘದ ಮಾಸಿಕ ಸಭೆ
Monthly meeting of the Retired Employees Association
ಕೊಲ್ಹಾರ 29 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮಾಸಿಕ ಸಭೆ ಪಟ್ಟಣದ ಎಂಪಿಎಸ್ ಶಾಲಾ ಸಭಾ ಭವನದಲ್ಲಿ ಶನಿವಾರ ಜರುಗಿತು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್ ಪತಂಗಿ ಮಾತನಾಡಿ 1 ಏಪ್ರಿಲ್ 2026 ಕ್ಕಿಂತ ಮುಂಚಿತವಾಗಿ ನಿವೃತ್ತರಾದ ಸರ್ಕಾರಿ ನೌಕರರಿಗೆ ಆರ್ಥಿಕ ಸೌಲಭ್ಯ ಹಾಗೂ ತುಟ್ಟಿಭತ್ಯೆ ನೀಡದಿರುವ ಬಗೆಗೆ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಸಭೆಗೆ ತಿಳಿಸಿದರು. ನಿವೃತ್ತ ಶಿಕ್ಷಕಾದ ಬಿ.ಎಸ್ ಹಂಗರಗಿ, ಪಿ.ಸಿ ನಾಗರಾಳ ಮಾತನಾಡಿ ಸರಕಾರದ ನೀತಿಗೆ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹಾಕಿದರು. ವಿಷಯದ ಕುರಿತು ಹೋರಾಟ ಹಮ್ಮಿಕೊಳ್ಳಲಾಗುವುದರ ಬಗೆಗೆ ಸಂಘದ ಸದಸ್ಯರೊಂದಿಗೆ ಚರ್ಚಿಸಿದರು.ಸಂಘದ ಪ್ರಸಕ್ತ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೂಡ ಈ ಸಂದರ್ಭದಲ್ಲಿ ಜರುಗಿತು.ಕಾರ್ಯಕ್ರಮವನ್ನು ಎಸ್.ಎಸ್ ಪತಂಗಿ ನಿರೂಪಿಸಿ, ಸ್ವಾಗತಿಸಿದರು. ಕೆ.ಯು ಗಿಡ್ಡಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು.ವಿವಿಧ ಇಲಾಖೆಗಳ ನಿವೃತ್ತ ನೌಕರರು ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 