ನಗಿಸಿದ ದೇವರಿಗೆ ಸ್ಮಾರಕ ನಿರ್ಮಾಣ ಖಚಿತ: ಜಗ್ಗೇಶ್
ಬೆಂಗಳೂರು, ಜ 29, ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಅಭಿಮಾನಿಯೊಬ್ಬರು “ಕರ್ನಾಟಕದ ಜನರ ಹೃದಯ ಗೆದ್ದ ಹಾಸ್ಯ ನಟ ನರಸಿಂಹರಾಜು ಅವರ ಹೆಸರಲ್ಲಿ ಅವರ ನೆನಪು ಉಳಿಸಲು ತಿಪಟೂರಿನಲ್ಲಿ ಸ್ಮಾರಕ ಮಾಡಲಾಗುವುದು ಎಂದು ಕಾರ್ಯಕ್ರಮವೊಂದರಲ್ಲಿ ಅವರ ಶ್ರೀಮತಿಯವರಿಗೆ ಆಶ್ವಾಸನೆ ನೀಡಿದ್ದ ನೆನಪು, ಅದೇನಾದರೂ ಕಾರ್ಯಗತ ಆಗ್ತಿದೆಯಾ” ಎಂದು ಜಗ್ಗೇಶ್ ಅವರನ್ನು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ ಇದಕ್ಕೆ ಉತ್ತರಿಸಿರುವ ಜಗ್ಗೇಶ್, “ಖಂಡಿತ..ನಾನು ಹಾಗೂ ನನ್ನ ಗೆಳೆಯ, ಶಾಸಕ ನಾಗೇಶ್ ರವರು ಆ ಕಾರ್ಯದ ಬಗ್ಗೆ ವಿಶೇಷ ಆಸಕ್ತಿವಹಿಸಿರುವೆವು…ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನರಸಿಂಹರಾಜು ರವರ ಮಡದಿಗೆ ಕಳೆದವಾರ ನೀಡಿರುವೆ.. ನಗಿಸಿದ ದೇವರಿಗೆ ಖಡಿತ ನೆನಪಿನ ಸ್ಮಾರಕ ಆಗುತ್ತದೆ...ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 