ಮುಂದಿನ ಬಜೆಟ್ನಲ್ಲಿ ಪ್ರಾಥಮಿಕ ಶಿಕ್ಷಣ ಬಲವರ್ಧನೆಗೆ ಹೆಚ್ಚು ಅನುದಾನ : ಸಿಎಂ ಭರವಸೆ

ಬೆಳಗಾವಿ, 18 :ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮುಂದಿನ ಬಜೆಟ್ನಲ್ಲಿ ಹೆಚ್ಚು ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ರಾಜ್ಯ ವಿಧಾನ ಸಭೆಯಲ್ಲಿ ಮಂಗಳವಾರ ಭರವಸೆ ನೀಡಿದರು.

ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಶಾಸಕ ಬಿ. ಶ್ರೀರಾಮುಲು ಅವರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಶಿಕ್ಷಣ ವಾಹಿನಿಯಲ್ಲಿ ಮಕ್ಕಳನ್ನು ವೈಜ್ಞಾನಿಕ ಶಿಕ್ಷಣದತ್ತ ಕೊಂಡೊಯ್ಯಲು ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿನ ಕೊರತೆಗಳನ್ನು ಸರಿಪಡಿಸುವ ದೃಷ್ಟಿಯಿಂದಲೇ 1200 ಕೋಟಿ ರೂ. ಮೂಲಸೌಲಭ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ ಒಂದು ಸಾವಿರ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಇಂಗ್ಲಿಷ್ ಮಾಧ್ಯಮವನ್ನು ಆರಂಭಿಸಲಾಗಿದೆ. ಅಲ್ಲದೆ, ಗಡಿಭಾಗದ ಶಾಲೆಗಳ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಅಗತ್ಯವಿದ್ದು, ಮುಂದಿನ ವರ್ಷ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಲದೆ, ಭವಿಷ್ಯದ ಪ್ರಜೆಗಳಾದ ವಿದ್ಯಾಥರ್ಿಗಳನ್ನು ಸದೃಢವಾಗಿ ಹಾಗೂ ಪೌಷ್ಠಿಕಯುಕ್ತವಾಗಿ ಬೆಳೆಸುವ ಉದ್ದೇಶದಿಂದ ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.

ವಿದ್ಯಾಥರ್ಿಗಳ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಶಾಲೆಗಳನ್ನು ಮುಚ್ಚಿರುವುದಿಲ್ಲ. ಆದರೆ, ಶೂನ್ಯ ದಾಖಲಾತಿಗಳನ್ನು ಹೊಂದಿರುವ 318 ಶಾಲೆಗಳಲ್ಲಿನ ಶಿಕ್ಷಕರನ್ನು ತಾತ್ಕಾಲಿಕವಾಗಿ ಅವಶ್ಯಕತೆ ಇರುವ ಸಮೀಪದ ಶಾಲೆಗಳಿಗೆ ನಿಯೋಜಿಸಲಾಗಿದೆ. ಇಂತಹ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯಾದಲ್ಲಿ ಶಿಕ್ಷಕರನ್ನು ಪುನಃ ಹಿಂದಿನ ಶಾಲೆಗಳಿಗೆ ಮರುನಿಯುಕ್ತಿಗೊಳಿಸಿ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

ಅಲ್ಲದೆ ಒಂದರಿಂದ ಮೂರನೇ ತರಗತಿಯವರೆಗೆ ನಲಿ-ಕಲಿ ಪದ್ಧತಿಯಲ್ಲಿ ಸಂತಸದಾಯಕ ಕಲಿಕೆಗೆ ಒತ್ತು ನೀಡಲಾಗಿದೆ. ಗಣಿತ ಕಲಿಕೆ ಬಲವರ್ಧನೆಗೆ ನಾಲ್ಕರಿಂದ ಐದನೇ ತರಗತಿಗೆ ಗಣಿತ ಕಲಿಕಾ ಆಂದೋಲನ ಅನುಷ್ಠಾನಗೊಳಿಸಿ ಗಣಿತ ಕಿಟ್ ವಿತರಿಸಲಾಗಿದೆ.  ಎರಡು ಜೊತೆ ಉಚಿತ ಸಮವಸ್ತ್ರ ಹಾಗೂ ಪ್ರೌಢ ಶಾಲೆಗಳಿಗೆ ಒಂದು ಜೊತೆ ಉಚಿತ ಸಮವಸ್ತ್ರ ವಿತರಿಸಲಾಗಿದೆ. "ಶೂ ಭಾಗ್ಯ, "ವಿಶ್ವಾಸ ಕಿರಣ", "ಅಕ್ಷರ ದಾಸೋಹ ಮತ್ತು ಕ್ಷೀರಭಾಗ್ಯ ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಕಳಪೆ ಬೈಸಿಕಲ್ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶ ನೀಡಲಾಗಿದೆ. ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮವನ್ನು ಮುಂದುವರೆಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಎಂ.ಎಸ್.ಐ.ಎಲ್.ಗೆ ಹೆಚ್ಚುವರಿ 900 ಸನ್ನದು ಹಂಚಿಕೆ : 

ಎಂ.ಎಸ್.ಐ.ಎಲ್ ಸಂಸ್ಥೆಗೆ ರಾಜ್ಯಾದ್ಯಂತ  900 (ಸಿಎಲ್-2ಸಿ) ಸನ್ನದುಗಳನ್ನು ಹೆಚ್ಚುವರಿಯಾಗಿ ಮಾಡಲಾಗಿದೆ ಎಂದು                     ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪ ವೇಳೆ ಶಾಸಕ ದುಯರ್ೊಧನ ಐಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2009 ರಲ್ಲಿ  ಪ್ರತಿ ತಾಲೂಕಿಗೆ ಎರಡು ಸನ್ನದುಗಳಂತೆ 352 ಸನ್ನದುಗಳು,  ಜಿಲ್ಲಾ ಕೇಂದ್ರ ಸ್ಥಾನಕ್ಕೆ ಎರಡರಂತೆ 58 ಸನ್ನದುಗಳು ಹಾಗೂ ಎಂ.ಎಸ್.ಐ.ಎಲ್ ಸಂಸ್ಥೆ ಪ್ರಾದೇಶಿಕ ಬೇಡಿಕೆ ಅಧ್ಯಯನ ಆಧರಿಸಿ ಕೋರಿಕೆ ಸಲ್ಲಿಸುವ ಸ್ಥಳಗಳಿ 53 ಸನ್ನದುಗಳಂತೆ  ಒಟ್ಟು 463 ಸನ್ನದುಗಳನ್ನು ಹಂಚಿಕೆ ಮಾಡಲಾಗಿದೆ. 2016 ರಲ್ಲಿ 220 ವಿಧಾನಸಭಾ ಕ್ಷೇತ್ರಗಳಿಗೆ ತಲಾ ನಾಲ್ಕರಂತೆ 880, ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಕ್ಕೆ ಐದು ಸನ್ನದುಗಳಂತೆ ಒಟ್ಟು 20, ಹೀಗೆ ರಾಜ್ಯಾದ್ಯಂತ ಒಟ್ಟು 900 (ಸಿಎಲ್-2ಸಿ) ಸನ್ನದುಗಳನ್ನು ಎಂ.ಎಸ್.ಐ.ಎಲ್ ಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು. 

ಕನರ್ಾಟಕ ಅಬಕಾರಿ ನಿಯಮಾವಳಿಯಂತೆ ಸಕರ್ಾರಿ ಏಕಸ್ವಾಮ್ಯದ ಸಂಸ್ಥೆಗಳಿಗೆ ಖುದ್ದಾಗಿ ಸನ್ನದು ನಡೆಸುವ ಮತ್ತು ಬೇರೆ ವ್ಯಕ್ತಿಗಳಿಗೆ ಪರಭಾರೆ ನೀಡಬಾರದು ಎಂಬ ಷರತ್ತಿಗೊಳ್ಳಪಟ್ಟು ಸಿಎಲ್-(2ಸಿ) ಸನ್ನದು ಮಂಜೂರು ಮಾಡಲಾಗಿದೆ. 

ಅಲ್ಲದೆ ರಾಜ್ಯ ಅಥವಾ ರಾಷ್ಟ್ರೀಯ ಹೆದ್ದಾರಿ ಮಧ್ಯಭಾಗದಿಂದ 220 ಮೀಟರ್ ಅಂತರದಲ್ಲಿ ಮದ್ಯದ ಅಂಗಡಿ ಇರಬೇಕೆಂದು ಕನರ್ಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳಲ್ಲಿ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸದನದ ಗಮನಕ್ಕೆ ತಂದರು.