ಪ್ರಧಾನಿ ನಿಧಿಗೆ ಸಾರ್ವಜನಿಕ ಉದ್ದಿಮೆಗಳಿಂದ ಹೆಚ್ಚಿನ ನೆರವು - ಪ್ರಹ್ಲಾದ್ ಜೋಷಿ

ಬೆಂಗಳೂರು, ಮಾ 31, ಕೊರೋನಾ ವೈರಸ್ ನಿಯಂತ್ರಣ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ಆರ್ಥಿಕ ನೆರವು ನೀಡಲು ಮುಂದೆ ಬಂದಿವೆ ಎಂದು ಕೆಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ ಹೇಳಿದ್ದಾರೆ. ಇದಕ್ಕಾಗಿಯೇ ಸ್ಥಾಪಿಸಲಾಗಿರುವ ಪ್ರಧಾನಮಂತ್ರಿಯವರ ಪರಿಹಾರ ನಿಧಿಗೆ ಕೋಲ್ ಇಂಡಿಯಾ ೨೨೦ ಕೋಟಿ ರೂಪಾಯಿ ಹಾಗೂ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್ ಸಂಸ್ಥೆ ೨೫ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು, ಇದು ಸ್ವಾಗತಾರ್ಹ ಬೆಳವಣಿಗೆ ಎಂದು ಟ್ವೀಟ್ ಮಾಡಿದ್ದಾರೆ.