ಮಂದಗತಿಯಲ್ಲಿ ಸಾಗುತ್ತಿರುವ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು : ಸಿ. ಎಸ್ ನಾಡಗೌಡ

ಮಂದಗತಿಯಲ್ಲಿ ಸಾಗುತ್ತಿರುವ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು : ಸಿ. ಎಸ್ ನಾಡಗೌಡ  More funds should be provided for the development of the sector which is progressing slowly: C. S. N

ಮುದ್ದೇಬಿಹಾಳ 25 :  ಮತಕ್ಷೇತ್ರದ ಜನರ ಧ್ವನಿಯಾಗಿರುವ ಶಾಸಕ ಸಿ.ಎಸ್‌.ನಾಡಗೌಡ(ಅಪ್ಪಾಜಿ)ಅವರು ಸದನದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಬಗ್ಗೆ ಕೆಲ ಪ್ರಶ್ನೆಗಳನ್ನು ಕೇಳಿ ಸಂಬಂಧಿಸಿದ ಸಚಿವರಿಂದ ಉತ್ತರ ಪಡೆದುಕೊಂಡು ಯಾವ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿವೆಯೂ ಅವುಗಳಿಗೆ ಅನುದಾನ  ನೀಡಿ  ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳನ್ನು ವಿನಂತಿಸಿಕೊಂಡರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ದೇವಾಲಯಗಳಿಗೆ ಮುಜರಾಯಿ ಇಲಾಖೆಯಿಂದ ಎಷ್ಟು ಅನುದಾನ ಬಿಡುಗಡೆಯಾಗಿದೆ? ಮುಜರಾಯಿ ಇಲಾಖೆಗೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಷ್ಟು ದೇವಾಲಯಗಳು ಒಳಪಟ್ಟಿವೆ ಎಂದು ಶಾಸಕ ಸಿ.ಎಸ್‌. ನಾಡಗೌಡ(ಅಪ್ಪಾಜಿ)ಅವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರಡ್ಡಿ ಅವರನ್ನು ಚುಕ್ಕೆ ಗುರುತಿನಡಿ ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಸಚಿವರು, ಮೂರು ವರ್ಷದಲ್ಲಿ 3.29 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಮುದ್ದೇಬಿಹಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ 151 ದೇವಾಲಯಗಳು ಮುಜರಾಯಿ ಇಲಾಖೆಗೆ ಒಳಪಡುತ್ತವೆ ಎಂದು ಉತ್ತರಿಸಿದರು.

ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಾಳಾಗಿರುವ ರಸ್ತೆಗಳ ಅಭಿವೃದ್ಧಿಗೆ ಈ ಆಯವ್ಯಯದಲ್ಲಿ ಎಷ್ಟು ಅನುದಾನ ನೀಡಲಾಗಿದೆ. ಕಾಮಗಾರಿ ಸ್ಥಿತಿಗತಿ ಹೇಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ 300 ಕೋಟಿ ರೂ. ಅನುದಾನ ನೀಡಲಾಗಿದ್ದು, 11 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಒಂದು ಪೂರ್ಣ, ಒಂದು ಪ್ರಗತಿ, ಒಂದು ಅಂದಾಜು ತಯಾರಿಕೆ ಇನ್ನುಳಿದ ಎಂಟು ಕಾಮಗಾರಿಗಳು ಟೆಂಡರ್ ಹಂತದಲ್ಲಿವೆ ಎಂದು ಉತ್ತರಿಸಿದರು.

ಮುದ್ದೇಬಿಹಾಳ ತಾಲೂಕಿನಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇಲ್ಲದೆ ಇರುವುದರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗುತ್ತಿದೆ. ಇಲ್ಲಿ ಸರ್ಕಾರಿ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕೆ ಇದೇಯಾ ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ಜಿಲ್ಲೆಯಲ್ಲಿ ಮೂರು ಖಾಸಗಿ, ಇಂಜಿನಿಯರಿಂಗ್, ಎರಡು ಖಾಸಗಿ ಆರ್ಕಿಟೆಕ್ ಇಂಜಿನಿಯರಿಂಗ್ ಕಾಲೇಜಿ ಇವೆ. ಹೀಗಾಗಿ ನೂತನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಉದ್ದೇಶವಿಲ್ಲ ಎಂದು ಉತ್ತರಿಸಿದರು.ಮುದ್ದೇಬಿಹಾಳ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳಾ ಕಾಲೇಜು ಸ್ಥಾಪನೆ ಅಗತ್ಯವಾಗಿದೆ.

ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಕೇಳಿದಾಗ, ಹೊಸದಾಗಿ ಕಾಲೇಜು ಮಂಜೂರು ಮಾಡಲು ಅಲ್ಪಸಂಖ್ಯಾತರ ಸಮುದಾಯದ ಜನಸಂಖ್ಯೆ ಜನಪ್ರತಿನಿಧಿಗಳ ಬೇಡಿಕೆ ಅನುಸಾರ ಸೂಕ್ತ ಪ್ರಸ್ತಾವನೆ ಪಡೆದು ಕ್ರಮವಹಿಸಲಾಗುವುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಉತ್ತರಿಸಿದರು.ರಾಜ್ಯದಲ್ಲಿ ಹಾಗೂ ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಷ್ಟು ಕೊಳಚೆ ಪ್ರದೇಶಗಳನ್ನು ಘೋಷಣೆ ಮಾಡಲಾಗಿದೆ. ಇನ್ನೂಎಷ್ಟು ಕೊಳಚೆ ಪ್ರದೇಶವೆಂದು ಘೋಷಣೆ ಮಾಡಲು ಪ್ರಸ್ತಾವನೆ ಸಲ್ಲಿಕೆಯಾಗಿವೆ. 2026-27ನೇ ಸಾಲಿನಲ್ಲಿ ಎಷ್ಟು ಅನುದಾನ ಮೀಸ ಲಿಡಲಾಗಿದೆ ಎಂದು ವಸತಿ ಸಚಿವರನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2866 ಕೊಳಚೆ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.  

ಮುದ್ದೇಬಿಹಾಳ ಪಟ್ಟಣದಲ್ಲಿ 6 ಹಾಗೂ ತಾಳಿಕೋಟೆ ಪಟ್ಟಣದಲ್ಲಿ 13 ಒಟ್ಟು 19 ಕೊಳಚೆ ಪ್ರದೇಶಗಳು ಘೋಷಣೆಯಾಗಿವೆ. ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯ ಮುದ್ದೇಬಿಹಾಳ ಪಟ್ಟಣದಲ್ಲಿ ಇಂದಿರಾ ನಗರ ಸರ್ವೇ ನಂ.1574 ಉಳಿದ ಭಾಗ (2) ಪಿಲೇಕಮ್ಮ ನಗರ ರಿ.ಸ.ನಂ.70/1 ಉಳಿದ ಭಾಗ (3) ಕೊಳಚೆ ಗೊಲ್ಲರ ಓಣಿ ರಿ.ಸ.ನಂ.49ಎ ಮತ್ತು ಬಿ ಉಳಿದ ಭಾಗ ಹಾಗೂ (4) ಆಶ್ರಯ ಕಾಲೋನಿ ಪ್ರದೇಶಗಳನ್ನು ಕೊಳಚೆ ಪ್ರದೇಶವೆಂದು ಘೋಷಣೆ ಹೊರಡಿಸಲು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯಾಧಿಕಾರಿಗಳು, ಪುರಸಭೆ ಮುದ್ದೇಬಿಹಾಳ ಅವರಿಗೆ 5. 8.2024 ರಂದು ಹಾಗೂ ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ವಿಜಯಪುರ ಅವರಿಗೆ 15.9.2025 ರಂದು ಮಂಡಳಿ ವತಿಯಿಂದ ಮೋತ್ತ ಬರೆಯಲಾಗಿದೆ. 2026-27ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.