ಹಿರೇಕೆರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ
ಹಾವೇರಿ: ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಇಂದು ಹಿರೇಕೆರೂರಿನ ಕ್ರೀಡಾಂಗಣದಲ್ಲಿ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕಿನಲ್ಲಿನ ರಾಜ್ಯ ಸಕರ್ಾರದಿಂದ ಕೈಗೊಳ್ಳಲಾಗಿತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ 85.19ಕೋಟಿ ವೆಚ್ಚದಲ್ಲಿ 20 ಕಾಮಗಾರಿ, ಜಲಸಂಪನ್ಮೂಲ ಹಾಗೂ ನೀರಾವರಿ ನಿಗಮದಿಂದ 25 ಕೋಟಿ ವೆಚ್ಚದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಟ್ ಕವರ್ (ಆರ್ಚ ಟೈಪ್ ) ನಿಮರ್ಾಣ, ಪಂಚಾಯಿತ್ ರಾಜ್ಯ ಇಂಜಿನೀಯರಿಂಗ್ ಇಲಾಖೆಯಿಂದ 9.45 ಕೋಟಿ ವೆಚ್ಚದ 13 ಕಾಮಗಾರಿಗಳು, ಸಮಾಜಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಇಲಾಖೆಯಿಂದ 1.56 ಕೋಟಿ ವೆಚ್ಚದಲ್ಲಿ ಒಂದು ಕಾಮಾಗರಿಗೆ ಶಂಕುಸ್ಥಾಪನೆ ಸಂಸ್ಥಾಪನೆ ಮಾಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಗೃಹ, ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಕನರ್ಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ಶಿವಮೊಗ್ಗ ಸಂಸದ.ಬಿ.ವೈ.ರಾಘವೇಂದ್ರ, ಹಿರೇಕೆರೂರು ಜಿ.ಪಂ.ಉಪಾಧ್ಯಕ್ಷೆ ಗಿರಿಜಮ್ಮ. ಬ್ಯಾಲದಳ್ಳಿ, ತಾ.ಪಂ.ಅಧ್ಯಕ್ಷ ರಾಜು.ಗ ಬಣಕಾರ, ಉಪಾಧ್ಯಕ್ಷ ಕವಿತಾ ಕ. ಬಿದರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ನಾಯಕರು ಉಪಸ್ಥಿರಿದ್ದರು. ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾಥರ್ಿಗಳು ನಾಡಗೀತೆ ಪ್ರಸ್ತತ ಪಡಿಸಿದರು. ಅಪರ ಜಿಲ್ಲಾಧಿಕಾರಿ ಎಲ್ ತಿಪ್ಪೇಸ್ವಾಮಿ ಸ್ವಾಗತಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 