ರಾಜ್ಯದಲ್ಲಿ ಕೋವಿಡ್‌ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು: ಬಿ.ಶ್ರೀರಾಮುಲು

ಬೆಂಗಳೂರು, ಮೇ 6,ರಾಜ್ಯದಲ್ಲಿ ಕೋವಿಡ್‌ ಸೋಂಕಿತರಾದವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಹೇಳಿಕೆ ಅಪ್‌ಲೋಡ್‌ ಮಾಡಿರುವ ಅವರು, ಕೊರೋನಾ ನಿಯಂತ್ರಣದಲ್ಲಿ ರಾಜ್ಯಕ್ಕೆ ಪರಿಣಾಮಕಾರಿ ಫಲಿತಾಂಶ ಲಭ್ಯವಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಈವರೆಗೆ ದಾಖಲಾದ 673 ಪ್ರಕರಣಗಳ ಪೈಕಿ 331 ಜನರು ಗುಣಮುಖರಾಗಿದ್ದರೆ, 312 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ರಾಜ್ಯದ ಗುಣಮುಖರಾದವರ ಪ್ರಮಾಣ ಶೇಕಡಾ 49.18ರಷ್ಟಕ್ಕೇರಿದೆ. ಸದ್ಯ ಒಟ್ಟು ಭಾರತದ ಗುಣಮುಖರಾಗುತ್ತಿರುವವರ ಸರಾಸರಿ ಪ್ರಮಾಣ ಶೇಕಡಾ 27.41 ಎಂಬುದು ಗಮನಿಸಬೇಕಾದ ಅಂಶ ಎಂದು ಅವರು ತಿಳಿಸಿದ್ದಾರೆ.