ಜಿನಿವಾ, ಜೂನ್ 14,ಪ್ರಪಂಚದಾದ್ಯಂತ ಮತ್ತೆ 1,42,672 ಜನರಿಗೆ ಕೊರೊನಾ ವೈರಾಣು ಸೋಂಕು ದೃಢಪಟ್ಟಿದ್ದು ಒಟ್ಟು 75 ಲಕ್ಷಕ್ಕಿಂತಲೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 5,055 ಜನರು ಸೋಂಕಿನಿಂದ ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4,23,349 ಕ್ಕೆ ಏರಿಕೆಯಾಗಿದೆ ಎಂದು ಡಬ್ಲ್ಯು ಎಚ್ ಒ ಶನಿವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ. ಅಮೆರಿಕದಲ್ಲಿ ಅತಿ ಹೆಚ್ಚು ಸೋಂಕಿನ ಮತ್ತು ಸೋಂಕು ಸಂಬಂಧಿತ ಸಾವಿನ ಪ್ರಕರಣ ವರದಿಯಾಗಿದೆ. ಈ ಮಧ್ಯೆ ಜಗತ್ತಿನಾದ್ಯಂತ 77,66,625 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು 4,29,732 ಜನರು ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಇತ್ತೀಚಿನ ವರದಿ ತಿಳಿಸಿದೆ.